ಗಣಿ-ಭೂವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಕೇಸ್‌: ಓರ್ವ ಪೊಲೀಸ್ ವಶಕ್ಕೆ

ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಬೆಂಗಳೂರು ಪೊಲೀಸರು ಓರ್ವ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು, ಈತ ಪ್ರತಿಮಾ ಅವರ ಹಳೆ ಕಾರು ಚಾಲಕನಾಗಿದ್ದ.

ಹಲವು ವರ್ಷಗಳಿಂದ ಕಾರು ಚಾಲಕನಾಗಿದ್ದ ಕಿರಣ್​ನನ್ನು ಪ್ರತಿಮಾ ಅವರು ತೆಗೆದುಹಾಕಿದ್ದರು. ಕೆಲಸದಿಂದ ತೆಗದುಹಾಕಿದ್ದಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಕಿರಣ್ ಕಳೆದ ಐದು ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ಮಾಡುತ್ತಿದ್ದ.ಪೊಲೀಸ್ ವಿಚಾರಣೆ ವೇಳೆ ಆರೋಪಿ ಕಿರಣ್ ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗಿದ್ದು, ಕೆಲಸದಿಂದ ತೆಗೆದು ಹಾಕಿರುವುದರ ಬಗ್ಗೆ ಪ್ರತಿಮಾ ಮೇಲೆ ಕೋಪಗೊಂಡಿದ್ದ ಕಿರಣ್ ಮನೆಗೆ ಬಂದು ಕೊಲೆ ಮಾಡಿ ಚಾಮರಾಜನಗರಕ್ಕೆ ಪರಾರಿಯಾಗಿದ್ದು, ಆತನ ಮೊಬೈಲ್ ಲೋಕೆಷನ್ ಆಧರಿಸಿ ಪತ್ತೆ ಮಾಡಿ ಸುಬ್ರಮಣ್ಯ ಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಕ್ರಮ ಕಲ್ಲು ಗಣಿಗಾರಿಕೆ ಮೇಲೆ ರೇಡ್​ ಹೋಗುವ ಮಾಹಿತಿಯನ್ನು ಕಿರಣ್ ಲೀಕ್ ಮಾಡುತ್ತಿದ್ದು ಈ ಕಾರಣಕ್ಕೆ ಪ್ರತಿಮಾ ಅವರು ಕಿರಣ್​ಗೆ ಎಚ್ಚರಿಕೆ ನೀಡಿದ್ದರು. ಮಾತ್ರವಲ್ಲದೇ ಕಾರು ಅಕ್ಸಿಡೆಂಟ್ ಮಾಡಿರುವ ಬಗ್ಗೆಯೂ ಮಾಹಿತಿ ಇದ್ದು ಈ ಎಲ್ಲಾ ಕಾರಣಗಳಿಗೆ ಪ್ರತಿಮಾ ಆತನನ್ನು ಕೆಲಸದಿಂದ ತೆಗೆದುಹಾಕಿದ್ದರು.

Comments (0)
Add Comment