ಗೃಹಲಕ್ಷ್ಮಿ ಯೋಜನೆಯ ಹಣ : ಚಿಟ್‌ಫಂಡ್‌ನಲ್ಲಿ ಹೂಡಿಕೆ ಮಾಡಲು ಸರ್ಕಾರ ಪ್ಲಾನ್

ಬೆಂಗಳೂರು: ಕೇರಳ ಮಾದರಿಯ ಹೊಸ ಚಿಟ್‌ಫಂಡ್‌ ಕರ್ನಾಟಕ ಸರ್ಕಾರ ಜಾರಿ ಮಾಡಲು ಸರ್ಕಾರ ಮುಂದಾಗಿದೆ. ಮಹಿಳೆಯರಿಗೆ ಗೃಹಲಕ್ಷ್ಮಿ ಗ್ಯಾರಂಟಿ ಗಿಫ್ಟ್ ಕೊಟ್ಟ ಸರ್ಕಾರ ಅದೇ ದುಡ್ಡನ್ನು ಮಹಿಳೆಯರು ಚಿಟ್‌ಫಂಡ್‌ನಲ್ಲಿ ಹೂಡಿಕೆ ಮಾಡುವ ಹೊಸ ಸ್ಕೀಮ್‌ನ್ನು ತರಲು ರೆಡಿ ಮಾಡಿದೆ.

ಎಂಎಸ್‌ಐಎಲ್‌ನಿಂದ ಏಪ್ರಿಲ್‌ನಲ್ಲಿ ಈ ನಯಾ ಸ್ವರೂಪದ ಚಿಟ್‌ಫಂಡ್ ರಾಜ್ಯದ್ಯಾಂತ ಜಾರಿಯಾಗಲಿದ್ದು ಪ್ರಮುಖವಾಗಿ ಮಹಿಳೆಯರನ್ನು ಈ ಚಿಟ್‌ಫಂಡ್‌ನಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ.

ಚಿಟ್ ಫಂಡ್ ಎಂದರೆ ಭಾರತದಲ್ಲಿ ಬಳಕೆಯಲ್ಲಿರುವ ಒಂದು ಬಗೆಯ ಆವರ್ತಕ ಉಳಿತಾಯ ಹಾಗೂ ಸಾಲದ ಖಾತೆ ಸಂಘದ ವ್ಯವಸ್ಥೆಯಾಗಿದೆ.

ಗೃಹಲಕ್ಷ್ಮಿಯ ಯೋಜನೆಯಿಂದ ಮಹಿಳೆಯರಿಗೆ ಹಣ ಬರುತ್ತಿರುವುದರಿಂದ ಸರ್ಕಾರಿ ಸ್ವಾಮ್ಯದ ಎಂಎಸ್‌ಐಎಲ್ ಚಿಟ್‌ಫಂಡ್ ಉನ್ನತೀಕರಣಕ್ಕೆ ಉಪಯೋಗವಾಗಲಿದೆ.

Comments (0)
Add Comment