ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಬಗ್ಗೆ ಹೈಕೋರ್ಟ್ ಹೇಳಿದ್ದೇನು.?

 

 

ಬೆಂಗಳೂರು: ಸಾಮಾನ್ಯ ವರ್ಗದಿಂದ ಗ್ರಾಮ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾದವರು ಸರ್ಕಾರ ನಿಗದಿಪಡಿಸಿದ ಮೀಸಲಾತಿ ಜಾತಿಗೆ ಸೇರಿದ್ದಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಅರ್ಹರು ಅಂತ ರಾಜ್ಯ ಹೈಕೋರ್ಟ್‌ ಆದೇಶ ನೀಡಿದೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕುನ್ನಲ ಗ್ರಾಮ ಪಂಚಾಯಿತಿ ಸದಸ್ಯೆ ಚೈತ್ರಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸೂರಜ್‌ ಗೋವಿಂದರಾಜು ಅವರಿದ್ದ ಏಕಸದಸ್ಯ ಪೀಠ, ಈ ಆದೇಶ ನೀಡಿದೆ.

ಇದೇ ವೇಳೆ ನ್ಯಾಯಾಪೀಠವು, ಪ್ರತಿವಾದಿ ಅಪಾಮಣಿಯವರಿಗೆ ತಹಸೀಲ್ದಾ‌ ನೀಡಿರುವ ಜಾತಿ ಪ್ರಮಾಣಪತ್ರವನ್ನು ಜಾತಿ ಪರಿಶೀಲನಾ ಸಮಿತಿಗೆ ವಹಿಸಿದ್ದು, ಮುಂದಿನ 45 ದಿನಗಳಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಿದೆ.

ಇನ್ನೂ ‘ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯಿದೆ-1993 ರ ಸೆಕ್ಷನ್ 5 ರಡಿ ಮೀಸಲು ನೀಡುವುದಕ್ಕೆ ಅವಕಾಶಸಿದೆ. ಈ ಕಾಯಿದೆಯ ಸೆಕ್ಷನ್ 44 ವಿಭಿನ್ನವಾಗಿದೆ. ಸೆಕ್ಷನ್ 5ರಡಿ ಸಾಮಾನ್ಯ ವರ್ಗದಲ್ಲಿ ಸದಸ್ಯ ಸ್ಥಾನಕ್ಕೆ ಸ್ಪರ್ಧೆ ಮಾಡಿ ಆಯ್ಕೆಯಾಗಿದ್ದರೆ ಆನಂತರ ಸೆಕ್ಷನ್ 44ರಡಿ ಮಿಸಲು ವರ್ಗದಿಂದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ದೇ ಮಾಡಲು ಯಾವುದೇ ಸಮಸ್ಯೆ ಇಲ್ಲ ಅಂತ ಹೇಳಿದೆ.

ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಬಗ್ಗೆ ಹೈಕೋರ್ಟ್ ಹೇಳಿದ್ದೇನು.?
Comments (0)
Add Comment