ಚಾರ್ಮಾಡಿ ಘಾಟ್‌‌ನಲ್ಲಿ 100 ಅಡಿ ಪ್ರಪಾತಕ್ಕೆ ಉರುಳಿದ ಲಾರಿ – ಚಾಲಕ, ಕ್ಲೀನರ್ ಪಾರು

ಚಾರ್ಮಾಡಿ: ಮಳೆಯಿಂದಾಗಿ ಚಾರ್ಮಾಡಿ ಘಾಟಿಯಲ್ಲಿ ಮಂಜು ಆವರಿಸಿಕೊಂಡಿದ್ದ ಪರಿಣಾಮ ಲಾರಿಯೊಂದು ನೂರು ಅಡಿ ಪ್ರಪಾತಕ್ಕೆ ಉರುಳಿಬಿದ್ದ ಘಟನೆ ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ ನಡೆದಿದೆ.

ನೀರಿನ ಬಾಟಲ್ ತುಂಬಿದ ಲಾರಿ ಶುಕ್ರವಾರ ರಾತ್ರಿ ಪುತ್ತೂರಿನಿಂದ ಚಿತ್ರದುರ್ಗಕ್ಕೆ ಚಾರ್ಮಾಡಿ ಘಾಟಿಯಲ್ಲಿ ಆವರಿಸಿದ ದಟ್ಟ ಮಂಜಿನಿಂದ ದಾರಿ ಕಾಣದೆ 100 ಅಡಿ ಪ್ರಪಾತಕ್ಕೆ ಬಿದ್ದಿದೆ. ಆದರೆ ಅದೃಷ್ಟವಶಾತ್ ಲಾರಿ ಚಾಲಕ ಹಾಗೂ ಕ್ಲೀನರ್ ಗೆ ಯಾವುದೇ ಪ್ರಾಣಪಾಯವಿಲ್ಲದೆ ಪಾರಾಗಿದ್ದಾರೆ.

ಇನ್ನು ಲಾರಿ ತಡೆಗೋಡೆಗೆ ಡಿಕ್ಕಿ ಹೊಡೆದು ನೂರು ಅಡಿ ಪ್ರಪಾತಕ್ಕೆ ಉರುಳಿದೆ ಈ ವೇಳೆ ಅಲ್ಲಿ ಇದ್ದ ದೈತ್ಯ ಮರಕ್ಕೆ ಲಾರಿ ಸಿಲುಕಿಕೊಂಡ ಪರಿಣಾಮ ಅವಘಡ ತಪ್ಪಿದೆ.

ಈ ಕುರಿತು ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments (0)
Add Comment