ಚಿತ್ರದುರ್ಗ ಜಿಟಿಟಿಸಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

 

ಚಿತ್ರದುರ್ಗ: ಚಿತ್ರದುರ್ಗ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (ಜಿಟಿಟಿಸಿ) ಹೊಸದಾಗಿ ಪ್ರಾರಂಭಿಸಲು ಉದ್ದೇಶಿಸಿರುವ ಡಿಪ್ಲೋಮಾ ಇನ್ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇನ್ ಕೋರ್ಸ್ ಹಾಗೂ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈಮೇಕಿಂಗ್ ವಿಭಾಗದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜನವರಿ 25 ಅರ್ಜಿ ಸಲ್ಲಿಸಲು ಕೊನೆಯ ದಿನ.

ಚಿತ್ರದುರ್ಗ ಜಿಟಿಟಿಸಿ ಕೇಂದ್ರದಲ್ಲಿ 2024-24ರ ಶೈಕ್ಷಣಿಕ ಸಾಲಿಗೆ ಡಿಪ್ಲೋಮಾ ಇನ್ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇನ್ ಕೋರ್ಸ್ ಪ್ರಾರಂಭಿಸಲು ಉದ್ದೇಶಿಸಿದ್ದು, ಈ ಕೋರ್ಸ್‍ಗೆ ಬಿ.ಇ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಅಥವಾ ಎಂ.ಟೆಕ್ ಇನ್ ಎಲೆಕ್ಟ್ರಾನಿಕ್ಸ್ ಅಥವಾ ಅಲೈಡ್ ಕೋರ್ಸ್ ವಿದ್ಯಾರ್ಹತೆ ಆದ 3 ಜನ ಅತಿಥಿ ಉಪನ್ಯಾಸಕರು ಹಾಗೂ ಧೀರ್ಘಾವಧಿ ಕೋರ್ಸ್ ಆದ ಡಿಟಿಡಿಎಮ್ (ಡಿಪ್ಲೋಮಾ ಇನ್ ಟೂಲ್ ಅಂಡ್ ಡೈಮೇಕಿಂಗ್ ಕೋರ್ಸ್‍ಗೆ 1 ಬೋಧಕರ ಅವಶ್ಯಕತೆ ಇರುತ್ತದೆ.

ಆಸಕ್ತ ಅಭ್ಯರ್ಥಿಗಳು ಜನವರಿ 25ರೊಳಗೆ ಚಿತ್ರದುರ್ಗ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಸರ್ವೇ ನಂ.44, ಹಳೆಯ ಬೆಂಗಳೂರು ರಸ್ತೆ, ಕಣಿವೆಮಾರಮ್ಮ ದೇವಸ್ಥಾನದ ಹಿಂಭಾಗ, ಕುಂಚಿಗನಾಳ್, ಚಿತ್ರದುರ್ಗ ಈ ವಿಳಾಸಕ್ಕೆ ತಮ್ಮ ದಾಖಲಾತಿಗಳೊಂದಿಗೆ ಅರ್ಜಿ  ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9481866855, 9945616114 ಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ತಿಳಿಸಿದ್ದಾರೆ.

ಚಿತ್ರದುರ್ಗ ಜಿಟಿಟಿಸಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
Comments (0)
Add Comment