ಚುನಾವಣಾ ಬಾಂಡ್‌ಗಳ ಮಾಹಿತಿ ಬಹಿರಂಗಪಡಿಸಿದ ಎಲೆಕ್ಷನ್​ ಕಮಿಷನ್​: ಹಲವು ಕಂಪನಿಗಳ ಮುಖವಾಡ ಬಯಲು

ನವದೆಹಲಿ: ಭಾರತೀಯ ಚುನಾವಣಾ ಆಯೋಗ (ಇಸಿಐ) ಗುರುವಾರ ತನ್ನ ವೆಬ್‌ಸೈಟ್‌ನಲ್ಲಿ ಚುನಾವಣಾ ಬಾಂಡ್‌ಗಳ ಡೇಟಾವನ್ನು ಬಹಿರಂಗಪಡಿಸಿದೆ.ಎಸ್ ಬಿಐ ಮಂಗಳವಾರ ಚುನಾವಣಾ ಬಾಂಡ್‌ಗಳ ಡೇಟಾವನ್ನು ಆಯೋಗಕ್ಕೆ ಹಸ್ತಾಂತರಿಸಿತ್ತು. ಸುಪ್ರೀಂ ಕೋರ್ಟ್ ಆದೇಶವನ್ನು ಅನುಸರಿಸಿ, ಇಸಿಐ ತನ್ನ ವೆಬ್‌ಸೈಟ್‌ನಲ್ಲಿ ಡೇಟಾವನ್ನು ಅಪ್‌ಲೋಡ್ ಮಾಡಿದೆ.

ಎಸ್‌ಬಿಐ ನೀಡುವ ಮಾಹಿತಿಯಂತೆ 2018ರಿಂದೀಚೆಗೆ 16,518 ಕೋಟಿ ರೂ.ಗಳ ಚುನಾವಣಾ ಬಾಂಡ್‌ಗಳನ್ನು ನೀಡಿರುವುದಾಗಿ ಹೇಳಿದೆ. ಆಯೋಗವು ಎರಡು ವಿಭಾಗಗಳಲ್ಲಿ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಿದ್ದು, 337 ಪುಟಗಳ ಮೊದಲ ಭಾಗದಲ್ಲಿ ಬಾಂಡ್‌ ಖರೀದಿಸಿರುವ ಕಂಪನಿಗಳ ಹೆಸರು, ದಿನಾಂಕದ ವಿವರಗಳಿವೆ.

ಚುನಾವಣಾ ಬಾಂಡ್‌ಗಳನ್ನು ರಿಡೀಮ್ ಮಾಡಿದ ಪಕ್ಷಗಳಲ್ಲಿ ಬಿಜೆಪಿ, ಕಾಂಗ್ರೆಸ್, ಎಐಎಡಿಎಂಕೆ, ಬಿಆರ್‌ಎಸ್, ಶಿವಸೇನೆ, ಟಿಡಿಪಿ, ವೈಎಸ್‌ಆರ್ ಕಾಂಗ್ರೆಸ್, ಡಿಎಂಕೆ, ಜೆಡಿಎಸ್, ಎನ್‌ಸಿಪಿ, ತೃಣಮೂಲ ಕಾಂಗ್ರೆಸ್, ಜೆಡಿಯು, ಆರ್‌ಜೆಡಿ, ಎಎಪಿ ಮತ್ತು ಸಮಾಜವಾದಿ ಪಕ್ಷ ಸೇರಿವೆ.

ಚುನಾವಣಾ ಬಾಂಡ್‌ಗಳ ದಾನಿಗಳಲ್ಲಿ ಗ್ರಾಸಿಮ್ ಇಂಡಸ್ಟ್ರೀಸ್, ಮೇಘಾ ಇಂಜಿನಿಯರಿಂಗ್, ಪಿರಮಲ್ ಎಂಟರ್‌ಪ್ರೈಸಸ್, ಟೊರೆಂಟ್ ಪವರ್, ಭಾರ್ತಿ ಏರ್‌ಟೆಲ್, ಡಿಎಲ್‌ಎಫ್ ಕಮರ್ಷಿಯಲ್ ಡೆವಲಪರ್ಸ್, ವೇದಾಂತ ಲಿಮಿಟೆಡ್, ಅಪೊಲೊ ಟೈರ್ಸ್, ಲಕ್ಷ್ಮಿ ಮಿತ್ತಲ್, ಎಡೆಲ್‌ವೀಸ್, ಪಿವಿಆರ್, ಕೆವೆಂಟರ್, ಸುಲಾ ವೈನ್, ವೆಲ್ಸ್‌ಪುನ್, ವೆಲ್‌ಸ್‌ಪನ್, ಪರ್ಮಾ ಇತರರು ಸೇರಿದ್ದಾರೆ. ಒಟ್ಟಾರೆ ಚುನಾವಣಾ ಬಾಂಡ್‌ ಬಹಿರಂಗದೊಂದಿಗೆ ಹಲವು ಕಂಪನಿಗಳ ಹಾಗೂ ರಾಜಕೀಯ ಪಕ್ಷಗಳ ಮುಖವಾಡ ಕಳಚಿ ಬಿದ್ದಿದೆ.

Comments (0)
Add Comment