ಚೈತ್ರಾ ಹೇಳಿದಂತೆ ಮಾಡಿದ್ದೀನಿ– ಸಿಸಿಬಿ ಮುಂದೆ ತಪ್ಪೊಪ್ಪಿಕೊಂಡ ಅಭಿನವ ಹಾಲಶ್ರೀ..!

ಬೆಂಗಳೂರು: ಉದ್ಯಮಿ ಗೋವಿಂದ ಪೂಜಾರಿಗೆ ವಿಧಾನ ಸಭಾ ಟಿಕೆಟ್ ತೆಗೆಸಿಕೊಡ್ತೆನೆಂದು ಕೋಟ್ಯಾಂತರ ರೂಪಾಯಿ ಪಡೆದು ವಂಚಿಸಿ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾದ ಹಿಂದೂಪರ ಹೋರಾಟಗಾರ್ತಿ ಚೈತ್ರಾ ಕುಂದಾಪುರ ವಂಚನೆ ಪ್ರಕರಣ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದೆ.
ತಲೆಮರೆಸಿಕೊಂಡಿದ್ದ ಹಾಲಶ್ರೀ ಸ್ವಾಮೀಜಿಯನ್ನು ಬಂದಿಸಿದ ಬಳಿಕ ಎಲ್ಲಾ ಕಾನೂನು ಪ್ರಕ್ರಿಯೆಗಳು ಮುಗಿದಿದ್ದು ಸಿಸಿಬಿ ತನಿಖಾಧಿಕಾರಿ ಮುಂದೆ ಅಭಿನವ ಹಾಲಶ್ರೀ ತಪ್ಪೊಪ್ಪಿಕೊಂಡಿದ್ದಾರೆ.
ಉದ್ಯಮಿ ಗೋವಿಂದ ಬಾಬು ಪೂಜಾರಿಯಿಂದ ಹಣ ಪಡೆದಿದ್ದು ನಿಜ ಮತ್ತು ಆ ಹಣ ಎಂಎಎಲ್‌ಎ ಟಿಕೆಟ್ ವಿಚಾರವಾಗಿ ಪಡೆದಿದ್ದೆ, ಆದರೆ ಟಿಕೆಟ್ ಸಿಗಲಿಲ್ಲವಾದ್ದರಿಂದ ಹಣ ವಾಪಸ್ ಕೊಡೋದಾಗಿ ಹೇಳಿದ್ದೆ. ಈಗಾಗಲೇ 50 ಲಕ್ಷ ಹಣ ವಾಪಸ್‌ ಕೊಟ್ಟಿದ್ದೇನೆ. ಉಳಿದ ಹಣ ಮಠದಲ್ಲಿದೆ, ಈ ಪ್ರಕರಣದಲ್ಲಿ ನನ್ನದೇನೂ ತಪ್ಪಿಲ್ಲ, ಚೈತ್ರಾ ಹೇಳಿದಂತೆಮಾಡಿದ್ದೀನಿ. ತಪ್ಪಿಗೆ ನಾನೇ ಹೊಣೆಯಾಗಿದ್ದು, ಬೇರೆ ಯಾರೂ ಈ ಕೇಸ್ ನಲ್ಲಿ ಇಲ್ಲ ಅಂತಾ ಅಭಿನವ ಹಾಲಶ್ರೀ ಸಿಸಿಬಿ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ.

.
ಗೋವಿಂದ ಬಾಬು ಪೂಜಾರಿ ವಿರುದ್ದವೇ ದೂರು ದಾಖಲು ..!
ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಪಡೆಯಲು ಹೋಗಿ 5 ಕೋಟಿ ರೂ. ಕಳೆದುಕೊಂಡಿರುವುದಾಗಿ ದೂರು ನೀಡಿರುವ ಗೋವಿಂದ ಬಾಬು ಪೂಜಾರಿ ವಿರುದ್ಧವೇ ಈಗ ಜಾರಿ ನಿರ್ದೇಶನಾಲಯದಲ್ಲಿ (ಇಡಿ) ದೂರು ದಾಖಲಾಗಿದೆ. 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಟಿಕೆಟ್‌ಗೆ ನೀಡಿದ್ದು ಹವಾಲಾ ಹಣ. ಅವರು ನಗದು ರೂಪದಲ್ಲಿ ನೀಡಿರುವುದು ಅಪರಾಧವಾಗಿದ್ದು ಅವರ ವಿರುದ್ಧ ತನಿಖೆ ನಡೆಸಬೇಕೆಂದು ಕೋರಿ ವಕೀಲ ನಟರಾಜ ಶರ್ಮಾ (Nataraj Sharma) ದೂರು ನೀಡಿದ್ದಾರೆ.

Comments (0)
Add Comment