ಛತ್ತೀಸ್‌ಗಢದ ನೂತನ ಮುಖ್ಯಮಂತ್ರಿಯಾಗಿ ವಿಷ್ಣುದೇವ್ ಸಾಯಿ ಆಯ್ಕೆ

ಛತ್ತೀಸ್‌ಗಢ: ಛತ್ತೀಸ್‌ಗಢದ ನೂತನ ಮುಖ್ಯಮಂತ್ರಿ ವಿಷ್ಣುದೇವ್ ಸಾಯಿ ಅವರನ್ನು ಬಿಜೆಪಿಯ ಹೈಕಮಾಂಡ್ ಆಯ್ಕೆ ಮಾಡಿದೆ . ಭಾನುವಾರ ನಡೆದ ಛತ್ತೀಸ್‌ಗಢ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಬುಡಕಟ್ಟು ಜನಾಂಗದ ನಾಯಕ, ರಾಜಕೀಯ ಅನುಭವಿ, ಮಾಜಿ ಕೇಂದ್ರ ಸಚಿವ ವಿಷ್ಣು ದೇವ್ ಸಾಯಿ ಅವರನ್ನು ಆಯ್ಕೆ ಮಾಡುವ ಮೂಲಕ ಒಂದು ವಾರದ ಸಸ್ಪೆನ್ಸ್‌ ಗೆ ಬಿಜೆಪಿ ತೆರೆ ಎಳೆದಿದೆ.

ಛತ್ತೀಸ್ ಗಢದ ರಾಯ್ಘರ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ವಿಷ್ಣುದೇವ್ ಸಾಯಿ, ಪ್ರಧಾನಿ ಮೋದಿ ಅವರ ಮೊದಲ ಅವಧಿಯಲ್ಲಿ ಉಕ್ಕು ಖಾತೆ ರಾಜ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ವಿಷ್ಣು ದೇವ್ ಸಾಯಿ ಅವರು 1990-98 ರ ನಡುವೆ ಮಧ್ಯಪ್ರದೇಶ ವಿಧಾನಸಭೆಯ ಸದಸ್ಯರಾಗಿ, ಛತ್ತೀಸ್‌ಗಢವನ್ನು ಮಧ್ಯಪ್ರದೇಶದಿಂದ ಬೇರ್ಪಡಿಸುವ ಮೊದಲು ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು. ವಿಷ್ಣು ದೇವು ಅವರು 1999 ರಿಂದ 2014 ರವರೆಗೆ ರಾಯ್‌ಗಢ ಕ್ಷೇತ್ರದಿಂದ ಸತತ ನಾಲ್ಕು ಲೋಕಸಭಾ ಚುನಾವಣೆಗಳನ್ನು ಗೆದ್ದಿದ್ದಾರೆ.

Comments (0)
Add Comment