ಜಿಲ್ಲಾ ನ್ಯಾಯಧೀಶರಿಂದ ಲೈಂಗಿಕ ಕಿರುಕುಳ ಆರೋಪ: ಸಿಜೆಐಗೆ ಮಹಿಳಾ ಜಡ್ಜ್ ಪತ್ರ

ನವದೆಹಲಿ: ಹಿರಿಯ ನ್ಯಾಯಾಧೀಶರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾದ ಉತ್ತರ ಪ್ರದೇಶದ ಮಹಿಳಾ ನ್ಯಾಯಾಧೀಶರೊಬ್ಬರು ಆತ್ಮಹತ್ಯೆಗೆ ಅನುಮತಿ ಕೊಡುವಂತೆ ಕೋರಿ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದಾರೆ.

ಬಹಿರಂಗ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಸಿಜೆಐ ಪ್ರಕರಣದ ಬಗ್ಗೆ ವರದಿ ಕೇಳಿದ್ದಾರೆ. ನನ್ನ ಜೀವನವನ್ನು ಗೌರವಯುತವಾಗಿ ಕೊನೆಗೊಳಿಸಲು ದಯವಿಟ್ಟು ನನಗೆ ಅನುಮತಿ ಕೊಡಿ ಎಂದು ಉತ್ತರ ಪ್ರದೇಶದ ಮಹಿಳಾ ನ್ಯಾಯಾಧೀಶೆಯೊಬ್ಬರು ಮುಖ್ಯ ನ್ಯಾಯಾಧೀಶರನ್ನು ಉದ್ದೇಶಿಸಿ ಪತ್ರದಲ್ಲಿ ಬರೆದಿದ್ದಾರೆ ಎನ್ನಲಾಗಿದೆ.

ಬಾರಾಬಂಕಿಯ ಜಿಲ್ಲಾ ನ್ಯಾಯಾಧೀಶರು ಮತ್ತು ಅವರ ಸಹಚರರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ನನಗೆ ತುಂಬಾ ಲೈಂಗಿಕ ಕಿರುಕುಳ ನೀಡಲಾಗಿದೆ. ನನ್ನನ್ನು ಸಂಪೂರ್ಣ ಕಸದಂತೆ ನಡೆಸಿಕೊಳ್ಳಲಾಗಿದೆ. ಇದರಿಂದ ನಾನೊಬ್ಬ ಕ್ರಿಮಿಯಂತೆ ಭಾಸವಾಗುತ್ತಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ.

ಇದಕ್ಕೆ ಸ್ಪಂದಿಸಿರುವ ಸಿಜೆಐ ಚಂದ್ರಚೂಡ್ ಅವರ ಸೂಚನೆಯ ಮೇರೆಗೆ ಸುಪ್ರೀಂ ಕೋರ್ಟ್ ಸೆಕ್ರೆಟರಿ ಜನರಲ್ ಅತುಲ್ ಎಂ.ಕುರ್ಹೇಕರ್ ಅವರು ಅಲಹಾಬಾದ್ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಅವರಿಗೆ ಪತ್ರ ಬರೆದಿದ್ದು, ಮಹಿಳಾ ನ್ಯಾಯಾಧೀಶರ ಎಲ್ಲಾ ದೂರುಗಳ ಸ್ಥಿತಿಗತಿಯ ಬಗ್ಗೆ ವರದಿಯನ್ನು ಕೇಳಿದ್ದಾರೆ.

 

 

Comments (0)
Add Comment