ಜಿ20 ವರ್ಚುವಲ್ ಶೃಂಗಸಭೆ ಭಾಷಣದಲ್ಲಿ ಇಸ್ರೇಲ್‌ ಸಂಘರ್ಷ ಕುರಿತು ಪ್ರಧಾನಿ ಮೋದಿ ಹೇಳಿದ್ದೇನು..?

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ಜಿ20 ವರ್ಚುವಲ್ ಶೃಂಗಸಭೆ ಭಾಷಣದಲ್ಲಿ ಮಧ್ಯಪ್ರಾಚ್ಯದಲ್ಲಿ ಇಸ್ರೇಲ್-ಹಮಾಸ್‌ ಸಂಘರ್ಷದ ಕುರಿತು ಪ್ರಸ್ತಾಪಿಸಿದರು. ಅಲ್ಲದೆ ಹಮಾಸ್ ನಾಯಕತ್ವವು 50 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿರುವುದನ್ನು ಸ್ವಾಗತಿಸಿದರು. ಇದೇ ವೇಳೆ ಭಯೋತ್ಪಾದನೆ, ನಾಗರಿಕರ ಸಾವುಗಳನ್ನು ಪ್ರತಿಯೊಬ್ಬರೂ ಖಂಡಿಸಬೇಕಿದೆ ಎಂದರು.

“ಸಂಘರ್ಷಕ್ಕೆ ಪರಿಹಾರವನ್ನು ಕಂಡುಕೊಳ್ಳಲು ಭಾರತ ಸಿದ್ಧವಾಗಿದೆ ಎಂದು ಅವರು ಹೇಳಿದರು. ಯುದ್ಧವು ಈ ಪ್ರದೇಶದಲ್ಲಿ ವ್ಯಾಪಕವಾದ ಭೌಗೋಳಿಕ ರಾಜಕೀಯ ಸಂಘರ್ಷವಾಗಿ ಹರಡುವುದನ್ನು ತಡೆಯಲು ಒಟ್ಟಾಗಿ ಕೆಲಸ ಮಾಡುವುದು ಮುಖ್ಯ ಎಂದು ಪ್ರಧಾನಿ ಹೇಳಿದರು.

ಕೃತಕ ಬುದ್ಧಿಮತ್ತೆಯ ಮಿಂಚಿನ ವೇಗದ ಬೆಳವಣಿಗೆಯನ್ನು ಸರಿಯಾಗಿ ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು ಮತ್ತು ಈ ಸಮಸ್ಯೆಯನ್ನು ಪರಿಹರಿಸಲು ಜಂಟಿಯಾಗಿ ಕೆಲಸ ಮಾಡಲು 20 (G20) ರಾಷ್ಟ್ರಗಳ ಗುಂಪು ಗಮನಹರಿಸುವಂತೆ ಮನವಿ ಮಾಡಿದರು. ಇಂದು ಜನರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಎಐ ಅನ್ನು ಅಭಿವೃದ್ಧಿಪಡಿಸಬೇಕು ಎಂದು ಹೇಳಿದರು. ಎಐ ಜನರನ್ನು ತಲುಪಬೇಕು ಮತ್ತು ಅದು ಸಮಾಜಕ್ಕೆ ಸುರಕ್ಷಿತವಾಗಿರಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

Comments (0)
Add Comment