ಜ.28ಕ್ಕೆ ಬಿಜೆಪಿ- ಜೆಡಿಯು ಮೈತ್ರಿ ಸರ್ಕಾರದ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣ ವಚನ

ನವದೆಹಲಿ:ಜನವರಿ 28 ರಂದು ಬಿಹಾರ ಜನತಾ ದಳ ಮತ್ತು ಬಿಜೆಪಿ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

ರಾಜ್ಯದ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ ನೀಡಬಹುದು. ನಿತೀಶ್ ಕುಮಾರ್ ಮತ್ತೊಮ್ಮೆ ಭಾರತೀಯ ಜನತಾ ಪಕ್ಷದೊಂದಿಗೆ ಸರ್ಕಾರ ರಚಿಸಬಹುದು. ಉಪಮುಖ್ಯಮಂತ್ರಿಯಾಗಿ ಬಿಜೆಪಿಯ ಸುಶೀಲ್ ಮೋದಿ ಪ್ರಮಾಣ ವಚನ ಸ್ವೀಕರಿಸಬಹುದು ಎಂದು ಹೇಳಲಾಗುತ್ತಿದೆ.

ಬಿಜೆಪಿಗೆ 2 ಉಪಮುಖ್ಯಮಂತ್ರಿ ಸ್ಥಾನಗಳನ್ನು ನೀಡುವ ಸಾಧ್ಯತೆ ಹೆಚ್ಚು ಎಂದು ಮೂಲಗಳು ತಿಳಿಸಿವೆ. ಮತ್ತೊಂದೆಡೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪಾಟ್ನಾದ ಮುಖ್ಯಮಂತ್ರಿ ನಿವಾಸದ ಹೊರಗೆ ಜಿಲೇಬಿ ಹಂಚುತ್ತಿರುವುದು ಕಂಡುಬಂದಿತ್ತು. ಮೂಲಗಳ ಪ್ರಕಾರ ಜೆಡಿಯು-ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಿತೀಶ್ ಕುಮಾರ್ ಮಾತ್ರ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ತಿಳಿದು ಬಂದಿದೆ.

ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮನೆಯಲ್ಲಿ ಸಭೆ ನಡೆದಿದೆ. ಶಾ ನಿವಾಸದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪ. ನಡ್ಡಾ ಕೂಡ ಸೇರಿದ್ದರು. ಸುಮಾರು ಎರಡು ಗಂಟೆಗಳ ಕಾಲ ಸಭೆ ನಡೆದಿದೆ ಅಂತ ಹೇಳಲಾಗ್ತ ಇದೆ.ಆದರೆ ಈ ಸಭೆಯ ನಂತರ ಯಾವೊಬ್ಬ ನಾಯಕರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿಲ್ಲ ಎಂದು ತಿಳಿದು ಬಂದಿದೆ.

Comments (0)
Add Comment