ಟ್ವಿಟರ್‌’ಗೆ 50 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು: ‘ಅನಿಯಂತ್ರಿತ ಸಾಮಾಜಿಕ ಜಾಲತಾಣಗಳ ಬಳಕೆ ಪ್ರಜಾ ಪ್ರಭುತ್ವದ ಅಪಾಯಕ್ಕೆ ಕಾರಣ’ ಎಂಬ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿರುವ ಹೈಕೋರ್ಟ್‌, ಕೆಲವು ವೈಯಕ್ತಿಕ ಖಾತೆಗಳನ್ನು ನಿರ್ಬಂಧಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶಗಳನ್ನು ಪ್ರಶ್ನಿಸಿ ಟ್ವಿಟರ್ ಸಲ್ಲಿಸಿದ್ದ ರಿಟ್‌ ಅರ್ಜಿ ವಜಾಗೊಳಿಸಿದ್ದು, ಸಂಸ್ಥೆಗೆ 50 ಲಕ್ಷ ರೂ. ದಂಡ ವಿಧಿಸಿದೆ.

ಈ ಸಂಬಂಧ ಕೇಂದ್ರ ಸರ್ಕಾರ ನೀಡಿದ್ದ ನೋಟಿಸ್‌ ಗಳನ್ನು ಪ್ರಶ್ನಿಸಿ ಟ್ವಿಟರ್‌’ನ ಅಧಿಕೃತ ಪ್ರತಿನಿಧಿ ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆ ನಡೆಸಿ, ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಪ್ರಕಟಿಸಿದೆ. 50 ಲಕ್ಷ ರೂ. ದಂಡ: ‘ಅರ್ಜಿದಾರರು ಕಾರ್ಪೊರೇಟ್‌ ದಾವೆದಾರರಾಗಿದ್ದು ಸರಿಸುಮಾರು 5 ಬಿಲಿಯನ್‌ ಡಾಲರ್‌ ನಷ್ಟು ವಾರ್ಷಿಕ ವಹಿವಾಟು ಹೊಂದಿದವರಾಗಿದ್ದಾರೆ. ಈ ರಿಟ್‌ ಅರ್ಜಿಯ ಸುದೀರ್ಘ ವಿಚಾರಣೆ ವೇಳೆ ನಮ್ಮ ಸ್ಥಳೀಯ ಕಕ್ಷಿದಾರರಾದ ಕಾರ್ಮಿಕರು, ದಲಿತರು, ಬಡವರು, ಮಹಿಳೆಯರು ತಮ್ಮ ವ್ಯಾಜ್ಯಗಳ ವಿಚಾರಣೆಯಲ್ಲಿ ವಿಳಂಬ ಅನುಭವಿಸುವಂತಾಗಿದೆ.

ಇಂದಿನಿಂದ ಅನ್ನಭಾಗ್ಯ, ಗೃಹಜ್ಯೋತಿ ಯೋಜನೆ ಜಾರಿ

ಆದ್ದ ರಿಂದ, 50 ಲಕ್ಷ ರೂ. ದಂಡ ವಿಧಿಸಲಾಗುತ್ತಿದೆ’ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ. ‘ದಂಡದ ಮೊತ್ತವನ್ನು 45 ದಿನಗಳ ಒಳಗೆ ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ ಪಾವತಿಸಬೇಕು. ಒಂದೊಮ್ಮೆ ವಿಫಲವಾದರೆ 45 ದಿನಗಳ ಬಳಿಕ ಪ್ರತಿದಿನ ಹೆಚ್ಚುವರಿಯಾಗಿ 5 ಸಾವಿರ ರೂ. ನೀಡಬೇಕು’ ಎಂದು ಆದೇಶಿಸಿದೆ.

Comments (0)
Add Comment