ಡಿ. 4ರೊಳಗೆ ನಿಗಮ ಮಂಡಳಿ ಪಟ್ಟಿ ಬಿಡುಗಡೆ.!

 

ಬೆಂಗಳೂರು: ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ನಿಗಮ– ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಕುರಿತಂತೆ ಚರ್ಚೆ ನಡೆಯುತಿತ್ತು. ಈಗ ಮಂಡಳಿಗಳಿಗೆ ನೇಮಕವಾಗುವ ಕಾಲ ಹತ್ತಿರ ಬಂದಿದೆ.

ಇಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮಂಗಳವಾರ ನಗರಕ್ಕೆ ಬರಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜೊತೆ ಎರಡನೇ ಸುತ್ತಿನ ಸಭೆ ನಡೆಸಲಿದ್ದಾರೆ.

ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ಈ ಸಭೆಯಲ್ಲಿ ನಿಗಮ– ಮಂಡಳಿಗಳಿಗೆ ನೇಮಕ ಬಹುತೇಕ ಅಂತಿಮಗೊಳ್ಳಲಿದೆ. ಬಳಿಕ ಪಟ್ಟಿಯನ್ನು ಹೈಕಮಾಂಡ್ಗೆ ಸಲ್ಲಿಸಲು ಈ ಮೂವರು ನಾಯಕರು ನಿರ್ಧರಿಸಿದ್ದಾರೆ. ಡಿ. 4ರಿಂದ ಬೆಳಗಾವಿ ಅಧಿವೇಶನ ಆರಂಭವಾಗಲಿದ್ದು, ಅದಕ್ಕೂ ಮೊದಲು ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆಯಂತೆ .

ಮೊದಲ ಹಂತದಲ್ಲಿ ಶಾಸಕರಿಗೆ ಮಾತ್ರ ಅವಕಾಶ ನೀಡಿ, ನಂತರ ಕಾರ್ಯರ್ತರಿಗೆ ಸ್ಥಾನ ನೀಡಲು ಮುಖ್ಯಮಂತ್ರಿ ಒಲವು ವ್ಯಕ್ತಪಡಿಸಿದ್ದರು. ಆದರೆ, ಶಾಸಕರ ಜೊತೆಗೆ ಕೆಲವು ಕಾರ್ಯಕರ್ತರಿಗೂ ಅವಕಾಶ ನೀಡುವುದು ಒಳ್ಳೆಯದು ಎಂದು ಡಿ.ಕೆ. ಶಿವಕುಮಾರ್ ಸಲಹೆ ನೀಡಿದ್ದಾರೆ. ಹೀಗಾಗಿ, 20 ಶಾಸಕರು, ವಿಧಾನ ಪರಿಷತ್ತಿನ ನಾಲ್ವರು ಸದಸ್ಯರ ಜೊತೆಗೆ ಪಕ್ಷದ 10 ರಿಂದ 15 ಕಾರ್ಯಕರ್ತರಿಗೂ ಅವಕಾಶ ನೀಡುವ ಬಗ್ಗೆ ಚರ್ಚೆ ನಡೆದಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Comments (0)
Add Comment