ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ದೀಪಿಕಾ ಪಡುಕೋಣೆ

ಆಂಧ್ರಪ್ರದೇಶ: ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ‘ಫೈಟರ್’ ಸಿನಿಮಾದಲ್ಲಿ ಹೃತಿಕ್ ರೋಷನ್ ಜೊತೆಯಾಗಿ ನಟಿಸುತ್ತಿದ್ದು, ಈ ಚಿತ್ರದ ಬಿಡುಗಡೆ ಬೆನ್ನಲ್ಲೇ ಅವರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ದೀಪಿಕಾ ಪಡುಕೋಣೆ ಮತ್ತು ಅವರ ಸಹೋದರಿ ಅನಿಶಾ ಅವರು ಡಿ. 14 ರಂದು ರಾತ್ರಿ ತಿರುಪತಿ ತಿಮ್ಮಪ್ಪನ ಸನ್ನಿದ್ಧಿಯಲ್ಲಿ ಕಾಣಿಸಿಕೊಂಡಿದ್ದಾರೆ.

ದೈವ ಭಕ್ತೆಯಾಗಿರುವ ದೀಪಿಕಾ ಪಡುಕೋಣೆ ಅವರು ಪದೇ ಪದೇ ದೇವಸ್ಥಾನದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಅಲಿಪಿರಿಯಿಂದ ಸುಮಾರು ಎರಡೂವರೆ ಗಂಟೆಗಳ ಕಾಲ ಬೆಟ್ಟ ಹತ್ತಿ ದೇವಸ್ಥಾನಕ್ಕೆ ತಲುಪಿದ್ದಾರೆ. ಅಲ್ಲಿನ ರಾಧೆ ಶ್ಯಾಮ ಗೆಸ್ಟ್‌ ಹೌಸ್‌ನಲ್ಲಿ ತಂಗಿದ್ದು, ನಂತರ ವಿಐಪಿ ಪಾಸ್ ಪಡೆದು ಇಂದು ಬೆಳಗ್ಗೆ ತಿರುಪತಿ ತಿಮ್ಮಪ್ಪನಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

Comments (0)
Add Comment