‘ನಾನು ಕುಟುಂಬ ಸಮೇತ ಅಯೋಧ್ಯೆ ರಾಮ ಮಂದಿರಕ್ಕೆ ಹೋಗುತ್ತೇನೆ’ – ದೇವೇಗೌಡ

ಹಾಸನ: ನಾನು ಕುಟುಂಬ ಸಹಿತವಾಗಿ ಅಯೋಧ್ಯೆ ರಾಮ ಮಂದಿರಕ್ಕೆ ಹೋಗುತ್ತೇನೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಅಯೋಧ್ಯೆ ರಾಮ ಮಂದಿರಕ್ಕೆನಾನು, ನನ್ನ ಪತ್ನಿ, ಮಗ ಹೆಚ್​ಡಿ ಕುಮಾರಸ್ವಾಮಿ ಮತ್ತು ಅವರ ಪತ್ನಿ ಹಾಗೂ ನಿಖಿಲ್‌ ಹೋಗುತ್ತೇವೆ ಎಂದರು.

ಇನ್ನು ಜನವರಿ 22ಕ್ಕೆ ವಿಶೇಷ ವಿಮಾನ ಮಾಡಿದ್ದು, ಅದರಲ್ಲೆ ಅಯೋಧ್ಯೆಗೆ ಹೋಗುತ್ತೇವೆ. ಸಂಜೆ ಒಕ್ಕಲಿಗರ ಒಂದು ಸಮಾವೇಶ ಇದೆ ಎಲ್ಲರಲ್ಲೂ ಭಾಗಿಯಾಗುತ್ತೇವೆ ಎಂದು ತಿಳಿಸಿದ್ದಾರೆ.

Comments (0)
Add Comment