ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭ.! ಹೇಗಿರುತ್ತೆ ಪೇಪರ್.!

 

 ಬೆಂಗಳೂರು:ರಾಜ್ಯಾದ್ಯಂತ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ. ಮಾರ್ಚ್ 01ರಿಂದ ಮಾರ್ಚ್ 22ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದೆ.

ಈ ಬಾರಿ 6,98,624 ಮಕ್ಕಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ. 2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ವಿಶೇಷ ಆಫರ್ ಘೋಷಿಸಿದೆ. ಪರೀಕ್ಷಾ ಕೇಂದ್ರಕ್ಕೆ ತೆರಳಲು ಹಾಗೂ ಮನೆಗೆ ಹಿಂದಿರುಗಲು ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೇಟ್ ತೋರಿಸಿ ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಗಳಲ್ಲಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು ಎಂದು ಕೆಎಸ್ಆರ್ಟಿಸಿ ಪ್ರಕಟಣೆ ತಿಳಿಸಿದೆ.

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭ.! ಹೇಗಿರುತ್ತೆ ಪೇಪರ್.!
Comments (0)
Add Comment