ನೂತನ ಚುನಾವಣಾ ಆಯುಕ್ತರ ನೇಮಕ: ಕೇಂದ್ರವನ್ನು ನಿರ್ಬಂಧಿಸುವಂತೆ ಕಾಂಗ್ರೆಸ್‌ ಸುಪ್ರೀಂಗೆ ಅರ್ಜಿ

ನವದೆಹಲಿ: ನೂತನ ಚುನಾವಣಾ ಆಯುಕ್ತರ ನೇಮಕವನ್ನು 2023ರ ಕಾನೂನಿನ ಪ್ರಕಾರ ಮಾಡದಂತೆ ಕೇಂದ್ರ ಸರ್ಕಾರವನ್ನು ನಿರ್ಬಂಧಿಸಬೇಕು ಎಂದು ಕೋರಿ ಕಾಂಗ್ರೆಸ್‌ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

ಚುನಾವಣಾ ಆಯುಕ್ತ ಅರುಣ್ ಗೋಯೆಲ್ ರಾಜೀನಾಮೆ ಮತ್ತು ಅನುಪ್ ಚಂದ್ರ ಪಾಂಡೆ ಅವರ ನಿವೃತ್ತಿಯ ನಂತರ ಎರಡು ಚುನಾವಣಾ ಆಯುಕ್ತರ ಹುದ್ದೆಗಳು ಖಾಲಿಯಾಗಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಚುನಾವಣಾ ಆಯುಕ್ತರ ನೇಮಕ ಮಾಡಲಿದ್ದೆ ಎಂದು ಸುಪ್ರೀಂನಲ್ಲಿ ಕಾಂಗ್ರೆಸ್‌ ನಾಯಕಿ ಜಯಾ ಠಾಕೂರ್‌ ಅರ್ಜಿ ಸಲ್ಲಿಸಿದ್ದಾರೆ.
ಅಲ್ಲದೇ ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಪರ ವಾದ ಮಂಡಿಸಿದ ಹಿರಿಯ ವಕೀಲ ವಿಕಾಸ್ ಸಿಗ್ ಮತ್ತು ವಕೀಲ ವರುಣ್ ಠಾಕೂರ್ ಅವರು ತುರ್ತು ವಿಚಾರಣೆ ನಡೆಸಬೇಕೆಂದು ಮನವಿ ಮಾಡಿದರು.

ಈ ಮನವಿಯನ್ನು ಪುರಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾ. ಜೆಬಿ ಪರ್ದಿವಾಲಾ ಮತ್ತು ನ್ಯಾ. ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ ಇಮೇಲ್‌ ಮಾಡಿ ಎಂದು ಸೂಚಿಸಿತು.ಪ್ರಧಾನಿ ಮೋದಿ ನೇತೃತ್ವದ ಸಮಿತಿ ಮಾರ್ಚ್‌ 15 ರಂದು ಚುನಾವಣಾ ಆಯೋಗದ ಆಯುಕ್ತರ ನೇಮಕ ಸಂಬಂಧ ಸಭೆ ನಡೆಸಲಿದೆ.

Comments (0)
Add Comment