ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಮನವಿ

 

ಚಿತ್ರದುರ್ಗ:   ದೀಪಾವಳಿಯು ಬೆಳಕಿನ ಹಬ್ಬವಾಗಿದ್ದು, ದೀಪಾವಳಿ ಹಬ್ಬವನ್ನು ಪರಿಸರಸ್ನೇಹಿಯಾಗಿ ಸರಳ ರೀತಿಯಲ್ಲಿ ಮಾಲಿನ್ಯ ರಹಿತವಾಗಿ ಮತ್ತು ಭಕ್ತಿಪೂರ್ವಕವಾಗಿ ಆಚರಿಸಬೇಕು, ಹಸಿರು ಪಟಾಕಿಯನ್ನು ಹೊರತುಪಡಿಸಿ, ಇತರೆ ಪಟಾಕಿಯ ಬಳಕೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರು ತಿಳಿಸಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವೂ ದೀಪಾವಳಿಯನ್ನು ಜಿಲ್ಲೆಯಾದ್ಯಂತ ಸಡಗರದಿಂದ ಆಚರಿಸಲಾಗುತ್ತಿದ್ದು, ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯ ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತಿದೆ ಹಾಗೂ ಜನರ ಆರೋಗ್ಯ ಹದಗೆಡಿಸುತ್ತಿದೆ, ಅಲ್ಲದೆ ಪ್ರಾಣಿ-ಪಕ್ಷಿಗಳ ಕಲರವಕ್ಕೆ ಘಾಸಿ ಉಂಟು ಮಾಡುತ್ತಿದೆ. ಹೀಗಾಗಿ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಸರಳ ರೀತಿಯಲ್ಲಿ ಮಾಲಿನ್ಯ ರಹಿತವಾಗಿ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸವುದು ಸೂಕ್ತವಾಗಿರುತ್ತದೆ.

ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಮನವಿ
Comments (0)
Add Comment