ಪಶ್ಚಿಮ ಬಂಗಾಳದಲ್ಲಿ ಸಿಎಎ, ಎನ್‌ಆರ್‌ಸಿ, ಯುಸಿಸಿ ಜಾರಿ ಮಾಡಲ್ಲ – ಸಿಎಂ ಮಮತಾ ಬ್ಯಾನರ್ಜಿ

ಕೋಲ್ಕತ್ತ : ಈದ್ ಹಬ್ಬದ ಪ್ರಯುಕ್ತ ರಾಜ್ಯದ ಜನತೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಭಾಶಯ ಕೋರಿದ್ದಾರೆ. ಕೋಲ್ಕತ್ತದಲ್ಲಿ ಈದ್ ಪ್ರಾರ್ಥನೆಯಲ್ಲಿ ಭಾಗವಹಿಸಿ ಮಾತನಾಡಿ, ನಾವು ಒಗ್ಗಟ್ಟಾಗಿದ್ದರೆ ಯಾರಿಂದಲೂ ಏನು ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

ಇದೇ ವೇಳೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಮತ್ತು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅನ್ನು ಒಪ್ಪಲು ಸಾಧ್ಯವಿಲ್ಲ ಎಂದು ಪುನರುಚ್ಚರಿಸಿದರು. ಚುನಾವಣೆ ಸಂದರ್ಭದಲ್ಲಿ ಕೆಲವರು ಉದ್ದೇಶಪೂರ್ವಕವಾಗಿ ಗಲಭೆ ಎಬ್ಬಿಸಲು ಪ್ರಯತ್ನಿಸುತ್ತಾರೆ. ಈ ದುರುದ್ದೇಶಪೂರಿತ ಸಂಚಿಗೆ ಒಳಗಾಗಬಾರದು ಮನವಿ ಮಾಡಿದರು.

ಇನ್ನು, ವಿರೋಧ ಪಕ್ಷಗಳ ‘ಇಂಡಿಯಾ’ ಒಕ್ಕೂಟ ಜತೆಗಿನ ಮೈತ್ರಿಯ ಕುರಿತು ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು. ತೃಣಮೂಲ ಕಾಂಗ್ರೆಸ್ ಪಕ್ಷದ ಹೋರಾಟ ಬಿಜೆಪಿ ವಿರುದ್ಧವಾಗಿದೆ. ಬಂಗಾಳದಲ್ಲಿ ದಯವಿಟ್ಟು ಮತಗಳು ಬೇರೆ ಯಾವುದೇ ಪಕ್ಷಕ್ಕೆ ಹೋಗದಂತೆ ನೋಡಿಕೊಳ್ಳಿ ಎಂದು ಕರೆ ನೀಡಿದರು. ವಿರೋಧ ಪಕ್ಷದ ನಾಯಕರ ವಿರುದ್ಧ ಕೇಂದ್ರದ ತನಿಖಾ ಸಂಸ್ಥೆಗಳನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.

Comments (0)
Add Comment