ಪುರುಷರ 50 ಮೀಟರ್ ರೈಫಲ್ ಶೂಟಿಂಗ್ ನಲ್ಲಿ ಭಾರತಕ್ಕೆ ಚಿನ್ನ

ಹ್ಯಾಂಗ್‌ಝೌ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ ನಲ್ಲಿ ಭಾರತೀಯರ ಪದಕ ಬೇಟೆ 6 ನೇ ದಿನವೂ ಎಂದಿನಂತೆ ಮುಂದುವರೆದಿದ್ದು, ಪುರುಷರ 50 ಮೀ ರೈಫಲ್ ತಂಡದ ಸ್ಪರ್ಧೆಯಲ್ಲಿ ಭಾರತೀಯ ತಂಡವು ಅಗ್ರಸ್ಥಾನ ಪಡೆದು ಚಿನ್ನದ ಪದಕಕ್ಕೆ ಕೊರಳೊಡ್ಡಿದೆ. ಶೂಟಿಂಗ್ ನಲ್ಲಿ 5ನೇ ಚಿನ್ನದ ಪದಕ ಭಾರತ ಪಡೆಯುವ ಮೂಲಕ ವಿಶ್ವದಾಖಲೆ ಸೃಷ್ಟಿಸಿದೆ.

ಪುರುಷರ 50 ಮೀಟರ್ ರೈಫಲ್ 3 ಪಿ ತಂಡ ಸ್ಪರ್ಧೆಯಲ್ಲಿ ಐಶ್ವರಿ ಪ್ರತಾಪ್ ಸಿಂಗ್ ತೋಮರ್, ಸ್ವಪ್ನಿಲ್ ಕುಸಾಲೆ, ಅಖಿಲ್ ಶೆರಾನ್ ತಂಡ ಚಿನ್ನದ ಪದಕ ಗೆದ್ದಿದ್ದಾರೆ.

2023ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಶೂಟಿಂಗ್‌ನಲ್ಲಿ ಇದು 15ನೇ ಪದಕ ಮತ್ತು 7ನೇ ಚಿನ್ನವಾಗಿದೆ. ಭಾರತವು 1769 ಅಂಕಗಳ ಗಮನಾರ್ಹ ಅಂಕಗಳಿಸಿತು.

Comments (0)
Add Comment