ಪುಸ್ತಕಗಳ ಆಯ್ಕೆಗಾಗಿ ಅರ್ಜಿ ಆಹ್ವಾನ.!

 

ಚಿತ್ರದುರ್ಗ : ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಗ್ರಂಥಾಲಯಗಳಿಗೆ ಏಕಗವಾಕ್ಷಿ ಯೋಜನೆಯಡಿ ಪುಸ್ತಕ ಖರೀದಿ ಆಯ್ಕೆಗಾಗಿ 2023ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಪುಸ್ತಕಗಳನ್ನು ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಯ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. 2024ರ ಫೆಬ್ರವರಿ 5 ಅರ್ಜಿ ಸಲ್ಲಿಸಲು ಕೊನೆಯ ದಿನ. 

2023ರಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಸಾಹಿತ್ಯ, ಕಲೆ, ವಿಜ್ಞಾನ, ವೃತ್ತಿ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಆದಾಯ ಉತ್ಪಾದನಾ ಯೋಜನೆ, ಸ್ಪರ್ಧಾತ್ಮಕ, ಪಠ್ಯ ಪುಸ್ತಕ, ಸಾಂದರ್ಭಿಕ ಮತ್ತು ಪರಾಮರ್ಶನ ಕೃತಿಗಳು ಹಾಗೂ ಮಕ್ಕಳ ಸಾಹಿತ್ಯ, ನವಸಾಕ್ಷರರ ಕೃತಿಗಳು ಇತ್ಯಾದಿ ವಿಷಯಗಳ ಕನ್ನಡ, ಆಂಗ್ಲ ಮತ್ತು ಇತರೆ ಭಾರತೀಯ ಭಾಷೆಯ ಗ್ರಂಥಗಳ ಆಯ್ಕೆಗೆ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಮತ್ತು ಪ್ರಕಟಣಾ ಸಂಸ್ಥೆಗಳಿಂದ ಪುಸ್ತಕಗಳನ್ನು ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಆಯ್ಕೆಗಾಗಿ ಸ್ವೀಕರಿಸಲು ಅರ್ಜಿಗಳನ್ನು ಆಹ್ವಾನಿಸಿದೆ.

ಪುಸ್ತಕಗಳು 2023ರಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾಗಿರಬೇಕು. ಮರುಮುದ್ರಣವಾದಲ್ಲಿ ಹತ್ತು ವರ್ಷಗಳ ಅಂತರವಿರಬೇಕು. ಈ ಬಗ್ಗೆ ದೃಢೀಕರಣ ಪತ್ರವನ್ನು ನೀಡಬೇಕು.

ಪುಸ್ತಕದ ಶೀರ್ಷಿಕೆ, ಗ್ರಂಥಕರ್ತರ ಹೆಸರು, ಪ್ರಕಾಶಕರ ಹೆಸರು, ಪುಟಸಂಖ್ಯೆ, ಪ್ರಕಟಣೆಯ ವರ್ಷ, ಆವೃತ್ತಿಯ ಎಲ್ಲಾ ವರ್ಷಗಳ ವಿವರ, ಮುಖ ಬೆಲೆಗಳನ್ನು ಸ್ಪಷ್ಟವಾಗಿ ನಮೂದಿಸಬೇಕು. ಇವುಗಳಲ್ಲಿ ತಾಂತ್ರಿಕ ಲೋಪದೋಷಗಳು ಏನಾದರೂ ಇದ್ದಲ್ಲಿ ತಿರಸ್ಕರಿಸುವ ಹಕ್ಕು ಆಯ್ಕೆ ಸಮಿತಿಗೆ ಇದೆ. ಕೃತಿಯ ಮೊದಲ ಮುದ್ರಣಕ್ಕೂ ಮತ್ತು ಮರು ಮುದ್ರಣಕ್ಕೂ ಹತ್ತು ವರ್ಷಗಳ ಅಂತರವಿದೆ ಎಂಬ ಬಗ್ಗೆ ಕಡ್ಡಾಯವಾಗಿ ಮುಚ್ಚಳಿಕೆ ಪತ್ರವನ್ನು ನೀಡತಕ್ಕದ್ದು. ಸುಳ್ಳು ಮಾಹಿತಿ ನೀಡಿದಲ್ಲಿ ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳಲಾಗುವುದು.

ನಿಗಧಿತ ಅರ್ಜಿ ನಮೂನೆಯು ಇಲಾಖೆಯ ಅಂತರ್ಜಾಲದಲ್ಲಿ www.dpl.karnataka.gov.inಹಾಗೂ ರಾಜ್ಯದ ಎಲ್ಲಾ ಜಿಲ್ಲಾ, ನಗರ ಕೇಂದ್ರ ಗ್ರಂಥಾಲಯಗಳಲ್ಲಿ ದೊರೆಯುತ್ತವೆ.

ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಪುಸ್ತಕಗಳನ್ನು ಗ್ರಂಥಸ್ವಾಮ್ಯ ವಿಭಾಗ, ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಉದ್ಯಾನವನ, ಬೆಂಗಳೂರು ಇಲ್ಲಿ 2024ರ ಜನವರಿ 31ರ ಒಳಗಾಗಿ ಕಾಪಿರೈಟ್ ಮಾಡಿಸಿರುವ ಪುಸ್ತಕಗಳನ್ನು ಆಯ್ಕೆಗಾಗಿ ಅರ್ಜಿಯೊಂದಿಗೆ ಪುಸ್ತಕದ  ಒಂದು ಪ್ರತಿಯನ್ನು ನೋಂದಣಿ ಪತ್ರದ ಪ್ರತಿಯೊಂದಿಗೆ ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ.ಬಿ.ಆರ್.ಅಂಬೇಡ್ಕರ್ ವೀಧಿ, ಬೆಂಗಳೂರು-560001 ಇಲ್ಲಿಗೆ 2024ರ ಫೆಬ್ರವರಿ 5ರ ಸಂಜೆ 5 ಗಂಟೆ ಒಳಗಾಗಿ ಸ್ಲಲಿಸುವುದು. ತದನಂತರ ಯಾವುದೇ ಪುಸ್ತಕಗಳನ್ನು ಆಯ್ಕೆಗೆ ಸ್ವೀಕರಿಸುವುದಿಲ್ಲ. ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿ, ಕಾಪಿರೈಟ್‍ನ ನೋಂದಣಿಯ ದೃಢೀಕರಿಸಿದ ನಕಲು ಪ್ರತಿ, ವಿತರಕರು ಸರಬರಾಜು ಹಕ್ಕನ್ನು ಪಡೆದಿದ್ದಲ್ಲಿ ಅದರ ನಕಲು ಪ್ರತಿಯನ್ನು ಅರ್ಜಿಯ ಜೊತೆ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಚಿತ್ರದುರ್ಗ ನಗರ ಕೇಂದ್ರ ಗ್ರಂಥಾಲಯ ಮುಖ್ಯ ಗ್ರಂಥಾಲಯಾಧಿಕಾರಿ ಕೊಳ್ಳಿ ಬಸವರಾಜ್ ತಿಳಿಸಿದ್ದಾರೆ.

ಪುಸ್ತಕಗಳ ಆಯ್ಕೆಗಾಗಿ ಅರ್ಜಿ ಆಹ್ವಾನ.!
Comments (0)
Add Comment