ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್.!

 

ಬೆಂಗಳೂರು: ‘13,352 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುಂದುವರಿಸಿ’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ಈ ಹಿಂದೆ ಆಯ್ಕೆಪಟ್ಟಿ ರದ್ದುಪಡಿಸಿದ್ದ ಏಕಸದಸ್ಯ ನ್ಯಾಯಪೀಠದ ತೀರ್ಪನ್ನು ರದ್ದುಪಡಿಸಿರುವ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ, ‘ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ 451 ಅಭ್ಯರ್ಥಿಗಳನ್ನು ಹೊರಗಿಡಲಾಗಿದೆ. ಈ ಅಭ್ಯರ್ಥಿಗಳು ತಮ್ಮ ತಕರಾರನ್ನು ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಸ್ಎಟಿ) ಮುಂದೆ ಮಂಡಿಸಿ ಸೂಕ್ತ ನ್ಯಾಯ ಪಡೆಯಬಹುದು’ ಎಂದು ಸ್ಪಷ್ಟಪಡಿಸಿದೆ.

ರಾಜ್ಯದಾದ್ಯಂತ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳು ದೊಡ್ಡ ಪ್ರಮಾಣದಲ್ಲಿ ಖಾಲಿ ಉಳಿದಿವೆ. ಇದರಿಂದ 6ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಹೀಗಾಗಿ, ರಾಜ್ಯ ಸರ್ಕಾರ 2023ರ ಜೂನ್ 8ರಂದು ಸಿದ್ಧಪಡಿಸಿರುವ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಾರ 13,352 ಮಂದಿ ಆಯ್ಕೆಯಾದ ಶಿಕ್ಷಕರ ನೇಮಕಾತಿ ಮುಂದುವರಿಸಬಹುದು’ ಎಂದು ತಿಳಿಸಿದೆ.

 

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್.!
Comments (0)
Add Comment