ಫ್ರೀ ವಿದ್ಯುತ್ ಗ್ರಾಹಕರಿಗೆ ಕರೆಂಟ್ ಶಾಕ್.!

 

ಬೆಂಗಳೂರು: ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ನಿಯಮಗಳಲ್ಲಿ ರಾಜ್ಯ ಸರ್ಕಾರ ಪ್ರಮುಖ ಬದಲಾವಣೆಗಳನ್ನು ಜಾರಿಮಾಡಿದೆ.

ಈ ಬಗ್ಗೆ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ಗೃಹಜ್ಯೋತಿ ಯೋಜನೆಯಡಿ ಶೇ.10ರಷ್ಟು ಬದಲು 10 ಯುನಿಟ್ ಫ್ರೀ ವಿದ್ಯುತ್ ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

ಹಿಂದಿನ ನಿಯಮದಲ್ಲಿ ಬಳಸಿದ ಯುನಿಟ್‌ಗಿಂತ ಶೇ.10ರಷ್ಟು ರಿಯಾಯಿತಿ ನೀಡಲಾಗಿತ್ತು. ಇದೀಗ ಶೇಕಡವಾರು ಬದಲಿಗೆ 10 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲು ನಿರ್ಧರಿಸಲಾಗಿದೆ ಎಂದಿದ್ದಾರೆ.

Comments (0)
Add Comment