ಬರ ಪರಿಹಾರ: ಕೇಂದ್ರದ ವಿರುದ್ಧ ಸುಪ್ರೀಂನಲ್ಲಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಕೆ

ಬೆಂಗಳೂರು: ಬರ ಪರಿಹಾರ ಘೋಷಿಸದ ಕೇಂದ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ಮಾಡಲು ನಿರ್ಧರಿಸಿದ್ದೇವೆ. ಕೇಂದ್ರ ಸರ್ಕಾರದ ವಿರುದ್ಧ ಆರ್ಟಿಕಲ್ 32ರ ಅಡಿ ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಎಂದು ಹೇಳಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ತೀವ್ರ ಬರಗಾಲ ಉಂಟಾಗಿದ್ದು, 5 ತಿಂಗಳು ಕಾದರೂ ಕೇಂದ್ರ ಇನ್ನೂ ಬರ ಪರಿಹಾರ ಬಿಡುಗಡೆ ಮಾಡಿಲ್ಲ. ಹೀಗಾಗಿ ಅನಿವಾರ್ಯವಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೇವೆ. ಕಾನೂನು ಪ್ರಕಾರ ನಮಗೆ ಸಿಗಬೇಕಾದ ಬರ ಪರಿಹಾರ ಸಿಗಬೇಕು ಎಂದು ತಿಳಿಸಿದ್ದಾರೆ.

ಎನ್‌ಡಿಆರ್‌ಎಫ್‌ ಅಡಿ ಪರಿಹಾರ ಹಣ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಲು ಸುಪ್ರೀಂ ಕೋರ್ಟ್‌ಗೆ ಅರ್ಜಿ ಹಾಕಿದ್ದೇವೆ.‌ ಸುಪ್ರೀಂ ಕೋರ್ಟ್ ಒಂದು ವಾರ ರಜೆ ಇದೆ.‌ ರಜೆ ಮುಗಿದ ಬಳಿಕ ನಾವು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಯಲಿದೆ ಎಂದರು

Comments (0)
Add Comment