‘ಬಿಜೆಪಿಯವರೇ ಕೊಟ್ಟ ಹೆಸರು ಬಕೆಟ್ ಜನತಾ ಪಾರ್ಟಿ’- ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು:ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಆರ್‌.ಅಶೋಕ ಅವರ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿಯವರೇ ಬಿಜೆಪಿಯವರಿಗೆ ಕೊಟ್ಟಿರುವ ಹೆಸರು B ಬಕೆಟ್ Jಜನತಾ Pಪಾರ್ಟಿ ಎಂದು ಕಾಂಗ್ರೆಸ್ ವ್ಯಂಗ್ಯ ಮಾಡಿದೆ.

ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಅಧಿವೇಶನದಲ್ಲಿ ಅಶೋಕ್ ಅವರು ಬಕೆಟ್ ಹಿಡಿದುಕೊಂಡೇ ರಾಜಕಾರಣ ಮಾಡುವವವರು ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ಆರ್‌.ಅಶೋಕ ಅವರೇ, ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆಯಲು ಯಾರಿಗೆ ಬಕೆಟ್ ಹಿಡಿದಿರಿ? ಯಾವ ಬ್ರ್ಯಾಂಡ್ ಬಕೆಟ್ ಹಿಡಿದಿರಿ? ಯಾರಿಗೆ ಬಕೆಟ್ ಹಿಡಿದು ನಿಮ್ಮ ಅಕ್ರಮಗಳನ್ನು ಮುಚ್ಚಿಕೊಂಡಿದ್ದೀರಿ? ಎಂದು ಲೇವಡಿ ಮಾಡಿದೆ.

ಇನ್ನು ಬಿಜೆಪಿಗೆ ಬಿಜೆಪಿಗರಿಂದಲೇ ಸಿಕ್ಕಿದ್ದು ಅದೆಷ್ಟು ಹೆಸರುಗಳು, ಭ್ರಷ್ಟ ಜನತಾ ಪಾರ್ಟಿ, ಬ್ಲಾಕ್ಮೇಲ್ ಜನತಾ ಪಾರ್ಟಿ, ಬ್ಲೂ ಬಾಯ್ಸ್ ಜನತಾ ಪಾರ್ಟಿ, ಇದೀಗ ಹೊಸದಾಗಿ ‘ಬಕೆಟ್ ಜನತಾ ಪಾರ್ಟಿ ಸೇರಿಕೊಂಡಿದೆ ಎಂದು ಕಾಂಗ್ರೆಸ್‌ ವ್ಯಂಗ್ಯವಾಡಿದೆ.

Comments (0)
Add Comment