ಬಿಜೆಪಿಯು ರೈತರಿಗೆ ಪರಿಹಾರ ಕೊಡಿ, ಇಲ್ಲವೇ ಕುರ್ಚಿ ಬಿಡಿ ಎಂಬ ನಾಟಕ ಮಾಡುತ್ತಿದೆ – ಸಿಎಂ ವ್ಯಂಗ್ಯ

ಬೆಂಗಳೂರು: ರೈತರಿಗೆ ಪರಿಹಾರ ಕೊಡಿ, ಇಲ್ಲವೇ ಕುರ್ಚಿ ಬಿಡಿ’ ಎಂಬ ಘೋಷಣೆಯೊಂದಿಗೆ ಜನತಾ ಪಕ್ಷದ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಇದೀಗ ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ಫೇಸ್ ಬುಕ್ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು, ಕಳೆದ ಐದು ತಿಂಗಳಿನಿಂದ ರಾಜ್ಯದ ಬರಪೀಡಿತ ಪ್ರದೇಶದ ರೈತರಿಗೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ಪರಿಹಾರದ ಹಣ ನೀಡದೆ ಅಲೆದಾಡುಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸುವ ಧೈರ್ಯ ಇಲ್ಲದ ಬಿಜೆಪಿ ನಾಯಕರು. ನಮ್ಮ ಸರ್ಕಾರದ ವಿರುದ್ದ ಪರಿಹಾರ ಕೊಡಿ ಅಥವಾ ಕುರ್ಚಿ ಬಿಡಿ’ ಎಂಬ ನಾಟಕ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಡಿದ್ದಾರೆ.

ರಾಜ್ಯದ ಬಿಜೆಪಿ ನಾಯಕರಿಗೆ ಕರ್ನಾಟಕದ ನೆಲದ ಮಣ್ಣು ಮತ್ತು ನೀರಿನ ಋಣ ಇದ್ದರೆ ದೆಹಲಿಗೆ ಹೋಗಿ ಕನ್ನಡಿಗರ ಬಗ್ಗೆ ಯಾಕಿಷ್ಟು ನಿಮಗೆ ದ್ವೇಷ? ಎಂದು ಪ್ರಧಾನಿಯವರನ್ನು ಪ್ರಶ್ನಿಸಬೇಕು. ಪರಿಹಾರಕ್ಕಾಗಿ ಒತ್ತಾಯಿಸಿ ಪ್ರಧಾನಿ ಕಾರ್ಯಾಲಯದ ಎದುರು ಪ್ರತಿಭಟನೆ ಮಾಡಬೇಕು. ಆದರೆ ಇದನ್ನೆಲ್ಲ ಬಿಟ್ಟು ಇವರ ಪೌರುಷ ರಾಜ್ಯದಲ್ಲಿ ಮಾತ್ರ. ಇಲ್ಲಿ ಎಲ್ಲರೂ ಹುಲಿ-ಸಿಂಹಗಳೇ. ಆದರೆ ಪ್ರಧಾನಮಂತ್ರಿ, ಗೃಹಸಚಿವರನ್ನು ಕಂಡ ಕೂಡಲೇ ಬಾಲ ಮುದುರಿದ ಇಲಿಗಳಾಗುತ್ತಾರೆ’ ಎಂದು ವ್ಯಂಗ್ಯವಾಡಿದ್ದಾರೆ.

ಇನ್ನು ಪರಿಹಾರಕ್ಕಾಗಿ ದೆಹಲಿಯಲ್ಲಿ ಧರಣಿ ನಡೆಸುತ್ತಿದ್ದ ರೈತರ ಮೇಲೆ ಅಂದು ದೌರ್ಜನ್ಯ ನಡೆಸಿದ್ದು ಕೂಡಾ ಇದೇ ಬಿಜೆಪಿ. ಇಂತಹ ಹುಟ್ಟು ರೈತ ವಿರೋಧಿ ಬಿಜೆಪಿ ನಾಯಕರು ಈಗ ವೇಷ ಬದಲಿಸಿ ಸುರಿಸುವ ಮೊಸಳೆ ಕಣ್ಣೀರನ್ನು ಅರ್ಥ ಮಾಡಿಕೊಳ್ಳದಷ್ಟು ದಡ್ಡ ರೈತರು ಯಾರಿಲ್ಲ ಎಂದು ಟೀಕೆವಾಡಿದ್ದಾರೆ.

Comments (0)
Add Comment