ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಿಕ್ತು ಬಿಗ್‌ ಟ್ವಿಸ್ಟ್‌

ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕಾರು ಅಪಘಾತವನ್ನೇ ಹಲ್ಲೆ ಮಾಡಿದ್ದಾರೆಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರೋಪಿಸಿದ್ದ ಮಣಿಕಂಠ ರಾಠೋಡ್ ಅಸಲಿ ಮುಖ ಬಯಲಾಗಿದೆ. ಹಲ್ಲೆ ಪ್ರಕರಣ ಸಂಬಂಧ ಮಣಿಕಂಠ ರಾಠೋಡ್​ ಬೆಂಬಲಿಗನನ್ನು ಪೊಲೀಸರು ವಿಚಾರಣೆ ಮಾಡಿದಾಗ ಮಣಿಕಂಠ ನಾಟಕ ಬಯಲಾಗಿದೆ.

ಈ ಮೂಲಕ ಚಿತ್ತಾಪುರ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಯಾವುದೇ ಹಲ್ಲೆ ನಡೆದಿಲ್ಲ. ಕಾರು ಅಪಘಾತದಲ್ಲಿ ಗಾಯಗೊಂಡು ಹಲ್ಲೆ ಮಾಡಿದ್ದಾರೆ ಎಂದು ಕಥೆ ಕಟ್ಟಿದ್ದರು ಎನ್ನುವುದು ತಿಳಿದು ಬಂದಿದೆ.

ಕಾರು ಅಪಘಾತವನ್ನ ರಾಜಕೀಯವಾಗಿ ಬಳಸಿಕೊಳ್ಳಲು ಮುಂದಾದ ಮಣಿಕಂಠ ನವೆಂಬರ್ 18 ರಂದು ಮಧ್ಯರಾತ್ರಿ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಿದರು. ಸಚಿವ ಪ್ರಿಯಾಂಕ್ ಖರ್ಗೆ ಬೆಂಬಲಿಗರು ಹಲ್ಲೆ ಮಾಡಿದ್ದಾರೆಂದು ಆರೋಪಿಸಿದ್ದರು. ಇದಕ್ಕೆ ಸಂಬಂಧಪಟ್ಟಂತೆ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದ್ರೆ, ಪೊಲೀಸರು ಈ ಪ್ರಕರಣವನ್ನು ತನಿಖೆ ನಡೆಸಿದಾಗ ಮಣಿಕಂಠ ರಾಠೋಡ್ ಸತ್ಯಾಂಶ ಹೊರಬಿದ್ದಿದೆ. ಈ ಮೂಲಕ ಮಣಿಕಂಠ ಸಿಕ್ಕಿಬಿದ್ದಿದ್ದಾರೆ.

ಮಣಿಕಂಠ ರಾಠೋಡ್ ಅವರ ಇನ್ನೋವಾ ಕ್ರಿಸ್ಟಾ ವೈಟ್ ಕಲರ್ ಕಾರು ಯಾದಗಿರಿ ಜಿಲ್ಲೆಯ ಚೆಪಟ್ಲಾ ಬಳಿ ಅಪಘಾತವಾಗಿತ್ತು. ನ. 18 ರ ಮಧ್ಯರಾತ್ರಿ ಕಾರು ಮರಕ್ಕೆ ಡಿಕ್ಕಿಯಾಗಿತ್ತು. ಮರಕ್ಕೆ ಡಿಕ್ಕಿ ಹೊಡೆದ ಹಿನ್ನಲೆ‌ ಕಾರಿನಲ್ಲಿದ್ದ ಮಣಿಕಂಠ ರಾಠೋಡ್ ಗಾಯಗೊಂಡಿದ್ದ. ಗಾಯಗೊಂಡ ಮಣಿಕಂಠ ರಾಠೋಡ್ ತನ್ನ ಮತ್ತೊಂದು ಕಾರಿನಲ್ಲಿ ತೆರಳಿ.ಇನ್ನು ಅಪಘಾತಗೊಂಡ ಇನ್ನೋವಾ ಕ್ರಿಸ್ಟಾ ಕಾರನ್ನು ಟೋಯಿಂಗ್ ಮೂಲಕ ರಾತ್ರೋ ರಾತ್ರಿ ಹೈದರಾಬಾದ್ ಶಿಫ್ಟ್ ಮಾಡಿಸಿದ್ದಾರೆ ಎಂದು ತಿಳಿದು ಬಂದಿದೆ.

ತನ್ನ ಮತ್ತೊಂದು ಕಾರಿನಲ್ಲಿ ಚಿತ್ತಾಪುರಕ್ಕೆ ಆಗಮಿಸಿದ್ದ ಮಣಿಕಂಠ ರಾಠೋಡ್, ಚಿತ್ತಾಪುರದಿಂದ ಕಲಬುರಗಿಗೆ ಬರುವಾಗ ಹಲ್ಲೆ ಮಾಡಲಾಗಿದೆ ಎಂದು ಹೇಳಿದ್ದಾರೆ. ತನ್ನದೆ ಕಾರಿನ ಗಾಜನ್ನ ಒಡೆದು ಹಾಕಿ ಏಳೆಂಟು ದುಷ್ಕರ್ಮಿಗಳಿಂದ ಹಲ್ಲೆಯಾಗಿದೆ ಎಂದು ಹೇಳಿದ್ದಾರೆ. ಬಳಿಕ ಚಿತ್ತಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಆದರು.

Comments (0)
Add Comment