ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಆಸ್ಪತ್ರೆಗೆ ದಾಖಲು.!

 

ಬಾಗಲಕೋಟೆ: ವಿಜಯಪುರದ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಬಾಗಲಕೋಟೆ ‌ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯದ ಮಾಹಿತಿ ಪ್ರಕಾರ ಕುಮಾರೇಶ್ವರ ಆಸ್ಪತ್ರೆಯ ತುರ್ತು ಚಿಕಿತ್ಸಾ ವಾರ್ಡ್‌ನಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದುಬಂದಿದ್ದು ಹೆಚ್ಚಿನ ಮಾಹಿತಿಗಾಗಿ ಕಾಯಬೇಕಿದೆ.

ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಆಸ್ಪತ್ರೆಗೆ ದಾಖಲು.!
Comments (0)
Add Comment