ಬಿಯರ್ ಪ್ರಿಯರಿಗೆ ಶಾಕ್ – ಅಬಕಾರಿ ಸುಂಕ ಹೆಚ್ಚಳಕ್ಕೆ ಪ್ರಸ್ತಾಪಿಸಿದ ಕರ್ನಾಟಕ ಸರ್ಕಾರ

ಬೆಂಗಳೂರು: ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಕರ್ನಾಟಕ ಸರ್ಕಾರವು ಮತ್ತೊಮ್ಮೆ ಹೆಚ್ಚಿಸಲು ಪ್ರಸ್ತಾಪಿಸಿರುವುದಾಗಿ ವರದಿಯಾಗಿದೆ.

ಕರ್ನಾಟಕ ಅಬಕಾರಿ ನಿಯಮಗಳ 1968ಕ್ಕೆ ತಿದ್ದುಪಡಿ ಮಾಡಲು ಕರಡು ಅಧಿಸೂಚನೆ ರೂಪಿಸಲಾಗಿದ್ದು, ಇದರಲ್ಲಿ ದರ ಹೆಚ್ಚಳವನ್ನು ಪ್ರಸ್ತಾಪಿಸಲಾಗಿದೆ.ಇನ್ನು ದರ ಹೆಚ್ಚಳಕ್ಕೆ ಅವಕಾಶ ನೀಡುವ ಹೊಸ ನಿಯಮಗಳು ಈ ತಿಂಗಳ ಕೊನೆಯಲ್ಲಿ ಅಥವಾ ಫೆಬ್ರವರಿ ಆರಂಭದಲ್ಲಿ ಅಂತಿಮಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.ಒಂದು ವೇಳೆ ಅಬಕಾರಿ ಸುಂಕ ಹೆಚ್ಚಳವಾದರೆ ಪ್ರತಿ 650 ಮಿಲಿ ಬಿಯರ್ ಬಾಟಲಿಗೆ 8-10 ರೂ. ವರೆಗೆ ದರ ಹೆಚ್ಚಾಗಲಿದೆ.

Comments (0)
Add Comment