ಬೆಂಗಳೂರು: ಅತ್ಯಾಧುನಿಕ ಪೊಲೀಸ್ ಕಮಾಂಡ್ ಸೆಂಟರ್ ಲೋಕಾರ್ಪಗೊಳಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸೇಫ್ ಸಿಟಿ ಯೋಜನೆಯಡಿ ನಗರದಲ್ಲಿ ತಲೆ ಎತ್ತಿರುವ ಅತ್ಯಾಧುನಿಕ ಕಮಾಂಡ್ ಸೆಂಟರ್ ನ ನೂತನ ಕಟ್ಟಡವನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋರ್ಕಾಪಣೆಗೊಳಿಸಿದರು. ಕಮಾಂಡ್ ಸೆಂಟರ್ ನಲ್ಲಿ ಅಳವಡಿಸಿರುವ ಕೃತಕ ಬುದ್ಧ ಮತ್ತೆ (ಎಐ) ಕ್ಯಾಮೆರಾ ಅಳವಡಿಕೆ ಹಾಗೂ ಅದರಿಂದಾಗುವ ಅನುಕೂಲಗಳ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದರು. ನೂತನ ಕಮಾಂಡ್ ಸೆಂಟರ್ ನಲ್ಲಿ ಡಯಲ್ -112 ಕಾಲ್ ಸೆಂಟರ್, ಮಹಿಳಾ ಸೇಫ್ಟಿ ಲ್ಯಾಂಡ್ ಕಮಾಂಡ್ ಸೆಂಟರ್ ನಲ್ಲಿ ಅಳವಡಿಸಲಾಗಿರುವ ವಿವಿಧ ತಂತ್ರಜ್ಞಾನಗಳ ಬಗ್ಗೆ ಮಾಹಿತಿ ಪಡೆದರು. ಪೊಲೀಸ್ ನಿಯಂತ್ರಣ ಕೊಠಡಿ ಸಂಖ್ಯೆಯಾದ 112 ಗೆ ಕರೆ ಮಾಡಿದರೆ ಕರೆ ಮಾಡಿದ ಸ್ಥಳದ ಲೊಕೇಷನ್ ಲಭ್ಯವಾಗಲಿದೆ. ಕಷ್ಟದಲ್ಲಿರುವವರು ಅಥವಾ ಅನ್ಯಾಯವಾದಾಗ ಕರೆ ಮಾಡಿದ ಸಂದರ್ಭದಲ್ಲಿ ಲಭ್ಯವಾಗುವ ಲೊಕೇಷನ್ ಸಹಾಯದಿಂದ ಕ್ಷಣಾರ್ಧದಲ್ಲೇ ಪೊಲೀಸರ ನೆರವು ಸಿಗಲಿದೆ. ಸಂಬಂಧಪಟ್ಟ ಪೊಲೀಸರಿಗೆ ಮಾಹಿತಿ ನೀಡಲಿದ್ದಾರೆ. ಮಾಹಿತಿ ಬರುತ್ತಿದ್ದಂತೆ ಕೂಡಲೇ ಹೊಯ್ಸಳ ಸಿಬ್ಬಂದಿ ಸ್ಥಳಕ್ಕೆ ಹೋಗಿ ನೆರವಿಗೆ ಧಾವಿಸಲಿದ್ದಾರೆ. ತಮ್ಮ ಠಾಣಾ ವ್ಯಾಪ್ತಿಯಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ನೇರ ಸಂಪರ್ಕ ಕಮಾಂಡ್ ಸೆಂಟರ್ ನಲ್ಲಿ ಇರಲಿದೆ. ಅಲ್ಲದೇ, ಕಾನೂನು ಹಾಗೂ ಸುವ್ಯವಸ್ಥೆ ಪೊಲೀಸ್ ಠಾಣೆಗಳು, ಎಂಟು ಡಿಸಿಪಿ ಕಚೇರಿಗಳು ಹಾಗೂ ಎಂಟು ಹೆಚ್ಚುವರಿ ವೀಕ್ಷಣಾ ಕೇಂದ್ರಗಳಲ್ಲಿ ಈ ಸೌಲಭ್ಯ ಕಲ್ಪಿಸಲಾಗಿದೆ. ನಿರ್ಭಯಾ ಯೋಜನೆಯಡಿ 661 ಕೋಟಿ ವ್ಯಯಿಸಲಾಗಿದೆ. ಬೆಂಗಳೂರು ನಗರದ ಸುರಕ್ಷತೆಗಾಗಿ ನಿರ್ಮಿಸಲಾಗಿದೆ. ವಿಶೇಷವಾಗಿ ಮಹಿಳೆಯರು, ಮಕ್ಕಳು, ಅಂಗವಿಕಲರ ಸುರಕ್ಷತೆ ದೃಷ್ಟಿಯಿಂದ ಆತ್ಯಾಧುನಿಕ ಕಮಾಂಡ್ ಸೆಂಟರ್ ನಿರ್ಮಿಸಲಾಗಿದೆ. ದೌರ್ಜನ್ಯಕ್ಕೊಳಗಾದ ಮಹಿಳೆಯರು ಕರೆ ಮಾಡಿದರೆ ಏಳು ನಿಮಿಷಕ್ಕೆ ಪೊಲೀಸರು ಸ್ಥಳಕ್ಕೆ ನೆರವಿಗೆ ಧಾವಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ರು.

Comments (0)
Add Comment