ಬೆಳ್ಳಂದೂರು ಶಾಲೆ ಆವರಣದಲ್ಲಿ ಸ್ಫೋಟಕ ಪತ್ತೆ; ಬೆಚ್ಚಿಬಿದ್ದ ಬೆಂಗಳೂರು

ಬೆಂಗಳೂರು: ನಗರದ ಬೆಳ್ಳಂದೂರು ಶಾಲೆ ವಠಾರದಲ್ಲಿ ಜಿಲೆಟಿನ್ ಕಡ್ಡಿ, ಡಿಟೋನೇಟರ್ ಹಾಗೂ ಇತರ ಕೆಲವು ಸ್ಫೋಟಕಗಳು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

ಸ್ಫೋಟಕಗಳನ್ನು ಬೆಂಗಳೂರಿನ ಪ್ರಕ್ರಿಯಾ ಶಾಲೆ ಮುಂಭಾಗದ ಖಾಲಿ ಜಮೀನಿನಲ್ಲಿ ಟ್ರಾಕ್ಟರ್ ನಲ್ಲಿ ಇಡಲಾಗಿತ್ತು. ಮೆಲ್ನೋಟಕ್ಕೆ ಕಟ್ಟಡ ನಿರ್ಮಾಣ ಮಾಡುವ ಜಾಗದಲ್ಲಿ ಬಂಡೆಗಳ ಸ್ಫೋಟಿಸಲು ಸ್ಫೋಟಕಗಳನ್ನು ತಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಅಕ್ರಮವಾಗಿ ಸ್ಫೋಟಕ ವಸ್ತು ಸಂಗ್ರಹಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬೆಂಗಳೂರಿನಲ್ಲಿ ಇತ್ತೀಚೆಗೆ ಅನೇಕ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ನಂತರ ಅದು ನಕಲಿ ಬೆದರಿಕೆ ಎಂಬ ಮಾಹಿತಿ ತಿಳಿದು ಬಂದಿದ್ದರೂ, ಬೆದರಿಕೆ ಸಂದೇಶದ ಹಿಂದೆ ವಿದೇಶಿ ಉಗ್ರ ಸಂಘಟನೆಗಳ ಕೈವಾಡ ಇರುವ ಬಗ್ಗೆ ಸಂದೇಹ ವ್ಯಕ್ತವಾಗಿತ್ತು. ಇಂತಹ ಸಂದರ್ಭದಲ್ಲಿ ಬೆಂಗಳೂರಿನ ಶಾಲೆಯ ಆವರಣದಲ್ಲಿ ಸ್ಪೋಟಕ ವಸ್ತುಗಳು ಪತ್ತೆಯಾಗಿರುವುದು ಆತಂಕ ಸೃಷ್ಟಿಗೆ ಕಾರಣವಾಗಿದೆ.

Comments (0)
Add Comment