ಬೆಳ್ಳಂ ಬೆಳಿಗ್ಗೆ ಕೆಲ ಜಿಲ್ಲೆಗಳಲ್ಲಿ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ .!

 

 

ಬೆಂಗಳೂರು: ಕರ್ನಾಟಕದ ಹಲವೆಡೆ ಇಂದು ಬೆಳ್ಳM ಬೆಳಗ್ಗೆ ಲೋಕಾಯುಕ್ತ ದಾಳಿಯಾಗಿದೆ. ರಾಜ್ಯದ 17 ಕಡೆ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಚಿತ್ರದುರ್ಗದಲ್ಲಿ ಇಬ್ಬರು ಅಧಿಕಾರಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ನೇತೃತ್ವದಲ್ಲಿ ಚಿತ್ರದುರ್ಗದ ಹಿರಿಯೂರಿನಲ್ಲಿ ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯ್ಕ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಸಿಸ್ಟೆಂಟ್ ಡೈರೆಕ್ಟರ್ ಕೃಷ್ಣಮೂರ್ತಿ ಮನೆ ಮೇಲೆ ದಾಳಿಯಾಗಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಹಾಸನದಲ್ಲೂ KPTCL ಜೂನಿಯರ್ ಇಂಜಿನಿಯರ್ H.E.ನಾರಾಯಣ ಎನ್ನುವರ ಮನೆ, ಕಚೇರಿ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಹಾಗೇ ಹಾವೇರಿಯಲ್ಲಿ ಅರಣ್ಯ ಇಲಾಖೆಯ ಇಬ್ಬರು ಅಧಿಕಾರಿಗಳ ಮನೆ, ಕಚೇರಿ ಮೇಲೆ ದಾಳಿಯಾಗಿದೆ. ಹಾವೇರಿ RFO ಪರಮೇಶಪ್ಪ ಪೇರಲನವರ್ ಹಾಗೂ ನ್ಯಾಮತಿ RFO ಮಾಲತೇಶ್​ ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಕಲಬುರಗಿಯಲ್ಲಿ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.‌ ಬೀದರ ವಲಯ ಅರಣ್ಯಾಧಿಕಾರಿ ಬಸವರಾಜ್ ಡಾಂಗೆ ಮತ್ತು ದೇವದುರ್ಗದ KBJNL ಇಇ ತಿಪ್ಪಣ್ಣ ಅನ್ನದಾನಿ ಮನೆಗಳ ಮೇಲೆ ದಾಳಿಯಾಗಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆಯ ಆರೋಪ ಹಿನ್ನಲೆ ಲೋಕಾಯುಕ್ತ ಎಸ್ಪಿ ಎಸ್.ಎಸ್.ಕರ್ನೂಲ್ ನೇತೃತ್ವದಲ್ಲಿ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲಿಸಿದ್ದಾರೆ.

ಬೆಂಗಳೂರಿನಲ್ಲೂ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್ ಕೊಟ್ಟಿದ್ದಾರೆ. ಕೆ.ಆರ್.​ಪುರಂ ಎಆರ್​ಒಗೆ ಸೇರಿದ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಮಾಹಿತಿ ಹಿನ್ನೆಲೆ ದಾಳಿ ನಡೆದಿದೆ ಎಂದು ತಿಳಿದುಬಂದಿದೆ,

 

 

ಬೆಳ್ಳಂ ಬೆಳಿಗ್ಗೆ ಕೆಲ ಜಿಲ್ಲೆಗಳಲ್ಲಿ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ .!
Comments (0)
Add Comment