ಬೆಳ್ಳಂ ಬೆಳಿಗ್ಗೆ ಖಾಸಗಿ ಬಸ್​​​ ಪಲ್ಟಿ : ಸ್ಥಳದಲ್ಲಿ ಇಬ್ಬರು ಸಾವು 10 ಕ್ಕೂ ಹೆಚ್ಚು ಮಂದಿಗೆ ಗಾಯ.!

 

ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಬಳಿಯ ಕಣಿವೆ ಪ್ರದೇಶದಲ್ಲಿ ಖಾಸಗಿ ಬಸ್​​​ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ಬೆಳಗ್ಗೆ 5 ಗಂಟೆ ಸುಮಾರಿಗೆ ನಡೆದಿದೆ.

ಬಸ್‌ನಲ್ಲಿದ್ದ 10ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಕೂಡಲೇ ಗಾಯಾಳುಗಳನ್ನು ಹೊಳಲ್ಕೆರೆ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಬೆಂಗಳೂರಿನಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಖಾಸಗಿ ಬಸ್ ಇದು ಎಂದು ತಿಳಿದುಬಂದಿದೆ.

ಬೆಳ್ಳಂ ಬೆಳಿಗ್ಗೆ ಖಾಸಗಿ ಬಸ್​​​ ಪಲ್ಟಿ : ಸ್ಥಳದಲ್ಲಿ ಇಬ್ಬರು ಸಾವು 10 ಕ್ಕೂ ಹೆಚ್ಚು ಮಂದಿಗೆ ಗಾಯ.!
Comments (0)
Add Comment