ಬೇಡಿಕೆ ಈಡೇರಿಸುವ ಭರವಸೆ ನೀಡಿದ ಸಾರಿಗೆ ಸಚಿವ – ಪ್ರತಿಭಟನೆ ಹಿಂಪಡೆದ ಖಾಸಗಿ ಸಾರಿಗೆ ಒಕ್ಕೂಟಗಳು

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಖಾಸಗಿ ಸಾರಿಗೆ ಒಕ್ಕೂಟಗಳು ನಡೆಸುತ್ತಿದ್ದ ಪ್ರತಿಭಟನೆಯನ್ನು ಸ್ಥಗಿತಗೊಳಿಸಿವೆ.

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಹೋರಾಟ ನಿರತರ ಮನವಿ ಆಲಿಸಿದ್ದರಿಂದ ಸಂಘಟನೆಗಳು ಬೆಂಗಳೂರು ಬಂದ್ ಅನ್ನು ಹಿಂಪಡೆದಿರುವುದಾಗಿ ತಿಳಿಸಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಖಾಸಗಿ ಸಾರಿಗೆ ಒಕ್ಕೂಟದ ಪ್ರಮುಖ ನಟರಾಜ್ ಶರ್ಮಾ, ನಾವು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಸ್ವತಃ ಸಾರಿಗೆ ಸಚಿವರೇ ಆಗಮಿಸಿ ನಮ್ಮ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದಾರೆ. ನಾಳೆಯಿಂದಲೇ ನಮ್ಮ ಬೇಡಿಕೆಗಳನ್ನು ಈಡೇರಿಸಲು ಮುಂದಾಗುವುದಾಗಿ ಹೇಳಿದ್ದಾರೆ . ಹೀಗಾಗಿ ನಾವು ಬಂದ್ ವಾಪಸ್ ಪಡೆದುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದ ರಾಮಲಿಂಗಾ ರೆಡ್ಡಿ ಅವರು, ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟಗಳ ಬಹುತೇಕ ಬೇಡಿಕೆ ಈಡೇರಿಸುತ್ತೇವೆ ಎಂದು ತಿಳಿಸಿದ್ದಾರೆ. ಚಾಲಕರ ಅಭಿವೃದ್ಧಿ ನಿಗಮ ಸ್ಥಾಪನೆ ಬಗ್ಗೆ ಸಿಎಂ ಜತೆ ಚರ್ಚೆ ಮಾಡಿದ್ದೇನೆ. ನಿಗಮ ಮಂಡಳಿಯನ್ನು ಮಾಡೇ ಮಾಡ್ತೇವೆ. ಅವರ ಸಮಸ್ಯೆಗಳು ಈ ಸರ್ಕಾರ ಬಂದಾಗಿನಿಂದ ಒರೋದಲ್ಲ ಹಿಂದಿನಿಂದಲೂ ಇದೆ. ಓಲಾ-ಊಬರ್, ಬೈಕ್ ಟ್ಯಾಕ್ಸಿ ಕೇಸ್‌ಗಳು ಇವೆ.

Comments (0)
Add Comment