ಭಾರೀ ಮಳೆ ಸಾಧ್ಯತೆ ಹಿನ್ನೆಲೆ ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ

ಮಂಗಳೂರು: ಕರಾವಳಿ ಭಾಗದಲ್ಲಿ ಮುಂದಿನ ಕೆಲವು ಗಂಟೆಗಳ ಕಾಲ ಧಾರಕಾರವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಭಾಗದಲ್ಲಿ ತೀವ್ರತೆಯ ಮಳೆಯಾಗುವ ಸಾಧ್ಯತೆಯಿರುವುದರಿಂದ ಜು.4 ರ ಇಂದು ಮಧ್ಯಾಹ್ನದಿಂದ ಜು.5 ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಖಲಿಸ್ತಾನ್ ಬೆದರಿಕೆ ಪೋಸ್ಟರ್: ಕೆನಡಾ ರಾಯಭಾರಿಗೆ ಸಮನ್ಸ್ ಜಾರಿ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.4ರ ಮಧ್ಯಾಹ್ನ ಬಳಿಕ ಮುಂದಿನ ಕೆಲವು ಗಂಟೆಗಳ ಕಾಲ ಬಲವಾದ ಮೇಲ್ಮೈ ಮಾರುತಗಳು ಬೀಸಲಿದ್ದು, ಗುಡುಗು ಮತ್ತು ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ.

ಒಳನಾಡಿನ ಜಿಲ್ಲೆಗಳಲ್ಲೂ ಮುಂದಿನ ಎರಡು ದಿನ ವ್ಯಾಪಕ ಮಳೆಯಾಗಲಿದ್ದು, ಈ ಭಾಗದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ನೀಡಲಾಗಿದೆ.

Comments (0)
Add Comment