ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆ

ಸೂರತ್: ಗುಜರಾತ್‌ ನ ಸೂರತ್‌ನಲ್ಲಿ ಮೂವರು‌ ‌ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.

ಮನೀಶ್ ಸೋಲಂಕಿ, ಅವರ ಪತ್ನಿ ರೀಟಾ, ಅವರ ತಂದೆ ಕಾನು, ಅವರ ತಾಯಿ ಶೋಭಾ ಮತ್ತು ಮೂವರು ಮಕ್ಕಳಾದ ದಿಶಾ, ಕಾವ್ಯ ಮತ್ತು ಕುಶಾಲ್ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಮನೆಯೊಂದರಲ್ಲಿ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಹೇಳಿದ್ದಾರೆ.

ಇನ್ನು 6 ಮಂದಿ ವಿಷ ಸೇವಿಸಿ ಪ್ರಾಣ ಕಳೆದುಕೊಂಡಿದ್ದು, ಒಬ್ಬರು ನೇಣುಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾರೆಂದು ಪೊಲೀಸರು ಹೇಳಿದ್ದಾರೆ.

Comments (0)
Add Comment