ಮಗಳು ಮೃತಪಟ್ಟರು ಆಕೆಯ ಉತ್ತರಾಧಿಕಾರಿಗಳಿಗೆ ಆಸ್ತಿ ಹಕ್ಕು ಇರುತ್ತದೆ- ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಮಗಳು ಮೃತಪಟ್ಟಿದ್ದಾಳೆ ಎಂಬ ಕಾರಣಕ್ಕೆ ಆಕೆಯ ಉತ್ತರಾಧಿಕಾರಿಗಳಿಗೆ ಆಸ್ತಿ ಹಕ್ಕು ಇಲ್ಲ ಎಂದು ಹೇಳಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.

ಹೆಣ್ಣು ಮಕ್ಕಳಿಗೆ ಉತ್ತರಾಧಿಕಾರ ಆಸ್ತಿ ಹಕ್ಕುಗಳನ್ನು ನೀಡಲು ಕಾಯ್ದೆಗೆ ತಿದ್ದುಪಡಿಯಾದ ಅವಧಿಗೆ(2005ರ ಸೆ.9ಕ್ಕೆ) ಮುನ್ನವೇ ಮಹಿಳೆ ಮೃತಪಟ್ಟಿದ್ದಾರೆ ಎಂಬ ಕಾರಣಕ್ಕೆ ಪೂರ್ವಜರ ಆಸ್ತಿಯ ಮೇಲಿನ ಆಸ್ತಿಯ ಹಕ್ಕುಗಳನ್ನು ಆಕೆಯ ಕಾನೂನಾತ್ಮಕ ವಾರಸುದಾರರಿಂದ ಕಸಿದುಕೊಳ್ಳುವಂತಿಲ್ಲ ಎಂದು ತೀರ್ಪುನಲ್ಲಿ ತಿಳಿಸಿದೆ.

ಗದಗ ಜಿಲ್ಲೆಯ ನರಗುಂದ ತಾಲೂಕಿನ ನಿವಾಸಿ ಚನ್ನಬಸಪ್ಪ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸುವ ಹೈಕೋರ್ಟ್ ನ್ಯಾಯಪೀಠ, ವಿನೀತಾ ಶರ್ಮಾ ಪ್ರಕರಣದಲ್ಲಿ ಸುಪ್ರೀಂಕೋರ್ಟ್‍ನ ಪೀಠವು ಈ ನಿಲುವನ್ನು ಸ್ಪಷ್ಟಪಡಿಸಿದೆ ಎಂದು ಹೇಳಿದೆ.

ಪಿತ್ರಾರ್ಜಿತ ಆಸ್ತಿಯಲ್ಲಿ ಪಾಲು ಪಡೆಯುವ ಹಕ್ಕು ಜನ್ಮದಿಂದ ಬಂದಿರುವುದೇ ವಿನಹ ಉತ್ತರಾಧಿಕಾರದಿಂದ ಬರುವುದಿಲ್ಲ. ಅವರು ಜೀವಂತವಾಗಿದ್ದಾರೆ ಇಲ್ಲವೇ ಎನ್ನುವುದು ಅಪ್ರಸ್ತುತ. ಹೀಗಾಗಿ, ಹೆಣ್ಣು ಮಕ್ಕಳಿಗೂ ಆಸ್ತಿಯಲ್ಲಿ ಪಾಲುದಾರರಾಗಿರುತ್ತಾರೆ. 2005ರಲ್ಲಿ ಹೆಣ್ಣು ಮಗಳು ಕಾನೂನು ಬದ್ಧ ವಾರಸುದಾರರಾಗಿರುತ್ತಾರೆ. ಪಿತ್ರಾರ್ಜಿತ ಆಸ್ತಿಯಲ್ಲಿ ಪಾಲು ಪಡೆಯಲು ಅರ್ಹರಾಗಿರುತ್ತಾರೆ ಎಂದು ಪೀಠ ತಿಳಿಸಿದೆ.

Comments (0)
Add Comment