ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿ ಮೋಹನ್ ಯಾದವ್ ಆಯ್ಕೆ

ಹೊಸದಿಲ್ಲಿ: ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯು ಪ್ರತಿಸ್ಪರ್ಧಿ ಕಾಂಗ್ರೆಸ್ ಅನ್ನು ಸೋಲಿಸಿ ಮೇಲುಗೈ ಸಾಧಿಸಿತ್ತು.

ಇದೀಗಾ ಚುನಾವಣೆ ಮುಗಿದು ಒಂದು ವಾರದ ಬಳಿಕ ಮಧ್ಯಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಉಜ್ಜಯಿನಿ ದಕ್ಷಿಣ ಕ್ಷೇತ್ರದ ಶಾಸಕ ಮೋಹನ್ ಯಾದವ್ ಅವರನ್ನು ಭಾರತೀಯ ಜನತಾ ಪಕ್ಷ ಆಯ್ಕೆ ಮಾಡಿದೆ.

ಭೋಪಾಲ್‌ನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಬಿಜೆಪಿ ಶಾಸಕರ ಸಭೆಯಲ್ಲಿ 58 ವರ್ಷದ ಮೋಹನ್ ಯಾದವ್ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಿದ್ದು, ಈ ಮೂಲಕ ಮಧ್ಯಪ್ರದೇಶ ಮುಖ್ಯಮಂತ್ರಿ ಹುದ್ದೆಯ ಕುರಿತು ನಡೆಯುತ್ತಿರುವ ಸಸ್ಪೆನ್ಸ್ ಕೊನೆಗೂ ಅಂತ್ಯಗೊಂಡಿದೆ.

ಮೋಹನ್ ಯಾದವ್ ಅವರು ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಉಜ್ಜಯಿನಿ ದಕ್ಷಿಣ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಆದರೆ ಇದೀಗ ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 230 ಸ್ಥಾನಗಳ ಪೈಕಿ 163 ಸ್ಥಾನಗಳನ್ನು ಗೆದ್ದ 10 ದಿನಗಳ ನಂತರ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಆಯ್ಕೆಯಾಗಿದ್ದಾರೆ.

ಇನ್ನು ಆರಂಭದಲ್ಲಿ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಮತ್ತು ನರೇಂದ್ರ ಸಿಂಗ್ ತೋಮರ್ ಸಿಎಂ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದರು. ಆದರೂ, ಅವರೇ ಪುನರಾಯ್ಕೆ ಆಗುವ ನಿರೀಕ್ಷೆ ಜನರಲ್ಲಿ ಇತ್ತು. ಆದರೂ, ಅವರೇ ಪುನರಾಯ್ಕೆ ಆಗುವ ನಿರೀಕ್ಷೆ ಜನರಲ್ಲಿ ಇತ್ತು. ಆದರೆ ಬಿಜೆಪಿ ಹೈಕಮಾಂಡ್ ಮಾತ್ರ ಯಾರೂ ಊಹಿಸದ ವ್ಯಕ್ತಿ ಮೋಹನ್ ಯಾದವ್ ಅವರನ್ನು ಸಿಎಂ ಆಗಿ ಆಯ್ಕೆ ಮಾಡಿ ಅಚ್ಚರಿ ನಿರ್ಧಾರ ತೆಗೆದುಕೊಂಡಿದೆ.

Comments (0)
Add Comment