ಮಧ್ಯಪ್ರದೇಶ, ಛತ್ತೀಸಗಡದಲ್ಲಿ ಮತದಾನ – 2533 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ

ಭೋಪಾಲ್ : ಮಧ್ಯಪ್ರದೇಶದ ಎಲ್ಲಾ 230 ವಿಧಾನಸಭಾ ಸ್ಥಾನಗಳಿಗೆ ಮತ್ತು ಛತ್ತೀಸಗಢದ 70 ಸ್ಥಾನಗಳಿಗೆ 2ನೇ ಹಂತದ ಚುನಾವಣೆಗೆ ಇಂದು ಮತದಾನ ಆರಂಭಗೊಂಡಿದೆ. ಹಿಂದಿ ಹೃದಯಭಾಗದ ಈ ಎರಡೂ ರಾಜ್ಯಗಳಲ್ಲಿ ಬಹುತೇಕ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಹಣಾಹಣಿ ಇದೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಸೇರಿದಂತೆ ಉಭಯ ಪಕ್ಷಗಳ ಹಲವು ಪ್ರಮುಖ ನಾಯಕರು ಕಣದಲ್ಲಿದ್ದಾರೆ.

ಛತ್ತೀಸಗಢ ವಿಧಾನಸಭೆ ಚುನಾವಣೆಗೆ ಎರಡನೇ ಹಂತದಲ್ಲಿ 70 ಸ್ಥಾನಗಳಿಗೆ ಇಂದು ಮತದಾನ ಆರಂಭವಾಗಿದೆ. ರಾಜ್ಯದ ಒಟ್ಟು 90 ಸ್ಥಾನಗಳ ಪೈಕಿ 20 ಸ್ಥಾನಗಳಿಗೆ ನ.7 ರಂದು ಮತದಾನ ನಡೆಯಿತು. ಮಧ್ಯಪ್ರದೇಶದಲ್ಲಿ ಇಂದು ಬೆಳಗ್ಗೆ ವಿಧಾನಸಭಾ ಚುನಾವಣೆಗೆ ಮತದಾನ ಆರಂಭವಾಗಿದ್ದು, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಅವರ ಮಾಜಿ ಸಿಎಂ ಕಮಲ್ ನಾಥ್ ಸೇರಿದಂತೆ 2,533 ಅಭ್ಯರ್ಥಿಗಳು 230 ವಿಧಾನಸಭಾ ಸ್ಥಾನಗಳಿಗೆ ಕಣದಲ್ಲಿದ್ದಾರೆ.

Comments (0)
Add Comment