ಮಳೆ ಕೊರತೆ ಹಿನ್ನೆಲೆ-ತಮಿಳುನಾಡಿಗೆ ನೀರು ಬಿಡುವ ಪರಿಸ್ಥಿತಿ ಇಲ್ಲ: ಡಿಕೆಶಿ

ಬೆಂಗಳೂರು: ಕರ್ನಾಟಕದಲ್ಲಿ ಸಮರ್ಪಕ ಮಳೆಯಾಗದ ಕಾರಣ ರಾಜ್ಯದ ಡ್ಯಾಂಗಳಲ್ಲಿ ಮತ್ತು ನದಿ ಜಲಾನಯನ ಪ್ರದೇಶಗಳಲ್ಲಿ ಸಾಕಷ್ಟು ನೀರು ಸಂಗ್ರಹವಾಗಿಲ್ಲ. ಹೀಗಾಗಿ ನೆರೆಯ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡಲು ರಾಜ್ಯಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳವಾರ ಹೇಳಿದ್ದಾರೆ.

ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ಶಿಫಾರಸು ಮಾಡಿದ ನಂತರ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಕೆ ಶಿವಕುಮಾರ್ ಅವರ ಈ ಹೇಳಿಕೆ ಬಂದಿದೆ. “ನಮ್ಮಲ್ಲಿ ನೀರಿಲ್ಲ ಎಂದು ನಾನು ಸ್ಪಷ್ಟಪಡಿಸುತ್ತಿದ್ದೇನೆ. ಅವರು (ಸಿಡಬ್ಲ್ಯೂಆರ್‌ಸಿ) ಆದೇಶವನ್ನು (ಶಿಫಾರಸು) ನೀಡಿದ್ದಾರೆ, ನಾಳೆ ವಿಷಯವು ಉನ್ನತ ಸಮಿತಿಯ ಮುಂದೆ ಹೋಗುತ್ತದೆ. ಇದೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ)ಸಮಿತಿಯಲ್ಲಿ ನಮ್ಮ ಕಾರ್ಯದರ್ಶಿಗಳು ಕೂಡ ಸದಸ್ಯರಾಗಿದ್ದಾರೆ. ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಿಗ್ಗೆ ವಿಷಯ ಚರ್ಚಿಸಿದ್ದೇವೆ ಮತ್ತು ನಮಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ನಮ್ಮ ಅಧಿಕಾರಿಗಳಿಗೆ ತಿಳಿಸಿದ್ದೇವೆ ಎಂದು ಶಿವಕುಮಾರ್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

Comments (0)
Add Comment