ಮಹಿಳಾ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಉಚಿತ ಪ್ರಯಾಣಕ್ಕೆ ರಸ್ತೆಗೆ ಇಳಿಯಲಿವೆ ಪಿಂಕ್‌ ಬಸ್‌!

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಸಕತ್ ಯಶಸ್ಸಾಗಿದೆ. ಈ ಯಶಸ್ಸಿನ ಹಿನ್ನೆಲೆಯಲ್ಲಿ ಮಹಿಳಾ ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ ಮಾಡಿಕೊಡಲು ಸಾರಿಗೆ ಇಲಾಖೆ ಚರ್ಚೆ ನಡೆಸಿದೆ. ಹೀಗಾಗಿ ಮಹಿಳಾ ಪ್ರಯಾಣಿಕರಿಗಾಗಿಯೇ ಪ್ರತ್ಯೇಕ ಬಸ್‌ಗಳು ರಸ್ತೆಗಿಳಿಯಲಿವೆ..!

ಯೋಜನೆಯಿಂದಾಗಿ ರಾಜ್ಯದಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಈ ಯೋಜನೆಯಿಂದಾಗಿ ನಾಲ್ಕೂ ನಿಗಮಗಳ ಬಸ್‌ಗಳಲ್ಲಿ ಒಟ್ಟಾರೆ 259 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ ಎಂದು ಸಾರಿಗೆ ಇಲಾಖೆ ಮಾಹಿತಿ ಹಂಚಿಕೊಂಡಿದೆ. ಹೀಗಾಗಿಯೇ ಮಹಿಳಾ ಪ್ರಯಾಣಿಕರಿಗಾಗಿ ಪ್ರತ್ಯೇಕ ಪಿಂಕ್ ಬಸ್ ಓಡಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ. ರಾಜ್ಯದಲ್ಲಿ ಪ್ರತಿದಿನ 60 ರಿಂದ 63 ಲಕ್ಷ ಮಹಿಳೆಯರು ಉಚಿತ ಬಸ್ ಯೋಜನೆಯ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಬಸ್‌ಗಳಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಾಗಿದೆ. ಹೆಣ್ಣು ಮಕ್ಕಳು ಬಸ್‌ಗಳಲ್ಲಿ ತುಂಬಿ ತುಳುಕುತ್ತಿದ್ದಾರೆ. ಹೀಗಾಗಿ ಅವರಿಗಾಗಿಯೇ ವಿಶೇಷವಾಗಿ ಪಿಂಕ್ ಬಸ್‌ಗಳನ್ನು ರಸ್ತೆಗಿಳಿಸಲು ಪ್ಲ್ಯಾನ್ ನಡೆಯುತ್ತಿದೆ. ಪ್ರಾಯೋಗಿಕವಾಗಿ ಬಿಎಂಟಿಸಿಯಲ್ಲಿ ಈ ಬಸ್‌ಗಳನ್ನು ಬಿಡುವ ಯೋಜನೆಯಲ್ಲಿದೆ ಸಾರಿಗೆ ಇಲಾಖೆ.

Comments (0)
Add Comment