ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣ: ಹೈಕೋರ್ಟ್ ನಿಂದ ಸ್ವಯಂಪ್ರೇರಿತ ಪಿಐಎಲ್ ದಾಖಲು

ಬೆಂಗಳೂರು: ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡಿದ್ದು, ಪ್ರಕರಣದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.

ಭಾರತ, ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿದ್ದು, ಕರ್ನಾಟಕದಂತ ಪ್ರಗತಿಶೀಲ ರಾಜ್ಯದಲ್ಲಿ ಇಂತಹ ಘಟನೆ ನಡೆದಿರುವುದು ಆಘಾತಕಾರಿಯಾಗಿದೆ. ಇದರೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಸಂಸ್ತ್ರಸ್ತೆಯ ಫೋಟೋ, ಸಂದರ್ಶನ ಬಿತ್ತರಿಸದಂತೆ ನಿರ್ಬಂಧಿಸಲಾಗಿದೆ. ಕೆಲ ಮಾಧ್ಯಮಗಳಲ್ಲಿ ಸಂತ್ರಸ್ತೆಯ ಫೋಟೋ ಹಾಗೂ ವಿಡಿಯೋವನ್ನು ಪ್ರಸಾರ ಮಾಡಲಾಗುತ್ತಿದೆ. ಇದರಿಂದ ಸಂಸ್ತ್ರಸ್ತ ಮಹಿಳೆಯ ಘನತೆಗೆ ಧಕ್ಕೆಯಾಗುವ ಹಿನ್ನೆಲೆ ನಿರ್ಬಂಧ ಹೇರಲಾಗಿದೆ. ಆದರೆ ಪ್ರಕರಣ ಸುದ್ದಿ ಪ್ರಸಾರಕ್ಕೆ ಕುರಿತ ಯಾವುದೇ ನಿರ್ಬಂಧವಿಲ್ಲ‌ ಎಂದು ಹೈಕೋರ್ಟ್​ನ ಮುಖ್ಯ ನ್ಯಾಯಾಧೀಶರಾದ ಪ್ರಸನ್ನ ಬಿ.ವರಾಳೆ ಮತ್ತು ನ್ಯಾ.ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಆದೇಶ ನೀಡಿದೆ.

ಪ್ರಕರಣ ಹಿನ್ನೆಲೆ

ಪ್ರೀತಿಸಿದ್ದ ಯುವತಿ ಜೊತೆಗೆ ಯುವಕನೋರ್ವ ಓಡಿ ಹೋದನೆಂದು ಆಕ್ರೋಶಗೊಂಡ ಯುವತಿಯ ಕುಟುಂಬಸ್ಥರು, ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ ಘಟನೆ ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಡಿ 11 ರಂದು ನಡೆದಿತ್ತು. ಇನ್ನು ಈ ಘಟನೆಗೆ ಸಂಬಂಧಿಸಿದಂತೆ 7 ಜನರನ್ನು ಪೊಲೀಸರು ಬಂಧಿಸಿದ್ದರು. ಇನ್ನು ಪರಾರಿಯಾದ ಇಬ್ಬರು ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Comments (0)
Add Comment