ಮಹಿಳೆಯರಿಗೆ ಸಿಹಿಸುದ್ದಿ: ಗೃಹಲಕ್ಷ್ಮಿ ಯೋಜನೆಯ ಇನ್ನೊಂದು ಬಿಗ್ ಅಪ್ಡೇಟ್..!

ಗೃಹಲಕ್ಷ್ಮಿ ಯೋಜನೆಯ ಇನ್ನೊಂದು ಬಿಗ್ ಅಪ್ಡೇಟ್
ಇನ್ನು ಕೂಡ ಗೃಹ ಲಕ್ಷ್ಮಿ ಯೋಜನೆಯ ಹಣ ಅರ್ಹರ ಖಾತೆಗೆ ತಲುಪುತ್ತಿಲ್ಲ. ರಾಜ್ಯದಲ್ಲಿ 8 .2 ಲಕ್ಷ ಗೃಹ ಲಕ್ಷ್ಮಿ ಅರ್ಹ ಫಲಾನುಭವಿಗಳ ಖಾತೆಗೆ ಇನ್ನು ಒಂದು ಕಂತಿನ ಹಣ ಕೊಡ ಜಮಾ ಆಗಿಲ್ಲ ಎನ್ನಬಹುದು.ಇದಕ್ಕೆಲ್ಲ ಪರಿಹಾರ ಸೂಚಿಸಲು ಸರ್ಕಾರ ಮುಂದಾಗಿದೆ. ಹೌದು, ಗೃಹ ಲಕ್ಷ್ಮಿ ಯೋಜನೆಯ ಹಣ ಯಾರ ಖಾತೆಗೆ ಜಮಾ ಆಗುತ್ತಿಲ್ಲವೋ ಅವರ ಸಮಸ್ಯೆಯನ್ನು ಪರಿಹರಿಸಲು ಅಧಿಕಾರಿಗಳು ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಬ್ಯಾಂಕ್ ಖಾತೆಯಲ್ಲಿ ಸಮಸ್ಯೆ ಇದ್ದರೆ ಅಂತವರಿಗೆ ಅಂಚೆ ಇಲಾಖೆಯಲ್ಲಿ ಖಾತೆ ತೆರೆಸಿ ಆ ಖಾತೆಗೆ ಹಣ ಜಮಾ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

ರಾಜ್ಯದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್
ಇನ್ನು ಗೃಹಿಣಿಯ ಸಮಸ್ಯೆಯ ಪರಿಹಾರಕ್ಕೆ ಅಧಿಕಾರಿಗಳನ್ನು ನೇಮಿಸಿರುವುದರ ಜೊತೆಗೆ  ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರು ಗೃಹಿಣಿಯರ ಜೊತೆ ನಿಂತು ಅವರ ಸಮಸ್ಯೆ ನಿವಾರಿಸಿ ಹಣ ಜಮಾ ಮಾಡಿಕೊಡುವಂತೆ ಸರ್ಕಾರ ಸೂಚಿಸಿದೆ. ಆಯಾ ಜಿಲ್ಲೆಯ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸಮಸ್ಯೆ ಇದ್ದವರ ಜೊತೆಗೆ ಹೋಗಿ ಸಮಸ್ಯೆ ಪರಿಹರಿಸಲಿದ್ದಾರೆ. ಆದಷ್ಟು ಬೇಗ ಗೃಹ ಲಕ್ಷ್ಮಿ ಯೋಜನೆಯ ಎಲ್ಲ ಲೋಪದೋಷಗಳು ನಿವಾರಣೆ ಆಗಲಿದೆ. ಫಲಾನುಭವಿಗಳ ಸಮಸ್ಯೆಯನ್ನು ಪರಿಹರಿಸಲು ಸದ್ಯ ಸರ್ಕಾರವೇ ಮುಂದೆ ಬಂದಿದೆ. ಫಲಾನುಭವಿಗಳ ಸಮಸ್ಯೆ ಪರಿಹಾರವಾದ ಎಲ್ಲ ಕಂತುಗಳ ಹಣವನ್ನು ಸರ್ಕಾರ ಒಂದೇ ಬಾರಿಗೆ ಜಮಾ ಮಾಡಲಿದೆ ಎನ್ನಲಾಗುತ್ತಿದೆ.

Comments (0)
Add Comment