ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಜೈಲು..!

ಕರಾಚಿ : ಪಾಕಿಸ್ತಾನದ ತೋಷಖಾನ ಕೇಸ್ ನಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ದೋಷಿ ಎಂದು ಪರಿಗಣಿಸಿ ಪಾಕಿಸ್ತಾನದ ನ್ಯಾಯಾಲಯವು 3 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ. ಇದರೊಂದಿಗೆ 1 ಲಕ್ಷ ರೂಪಾಯಿ ದಂಡವನ್ನೂ ವಿಧಿಸಲಾಗಿದೆ. ನ್ಯಾಯಾಲಯದ ಆದೇಶದ ಬೆನ್ನಲ್ಲೇ ಆತನ ವಿರುದ್ಧ ಬಂಧನ ವಾರಂಟ್ ಜಾರಿ ಮಾಡಿದ್ದಾರೆ. ಇನ್ನು ಪಾಕ್ ಕಾನೂನಿನ ಪ್ರಕಾರ ಇಮ್ರಾನ್ ಅವರಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದರೆ 5 ವರ್ಷಗಳವರೆಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ. ತೋಷಾಖಾನಾ ಪ್ರಕರಣದಲ್ಲಿ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಮುಖ್ಯಸ್ಥ ಮತ್ತು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಪಾಕಿಸ್ತಾನ ನ್ಯಾಯಾಲಯ ಶನಿವಾರ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಪಾಕಿಸ್ತಾನದ ಮಾಜಿ ಪ್ರಧಾನಿ ಅಧಿಕಾರದಲ್ಲಿದ್ದಾಗ ದುಬಾರಿ ಸರ್ಕಾರಿ ಉಡುಗೊರೆಗಳನ್ನು ಮಾರಾಟ ಮಾಡುವ ಮೂಲಕ ಲಾಭ ಪಡೆದಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಭ್ರಷ್ಟಾಚಾರ ಪ್ರಕರಣದ ಮರು ವಿಚಾರಣೆ ನಡೆಸುವಂತೆ ಕೆಳ ನ್ಯಾಯಾಲಯದ ತೀರ್ಪನ್ನು ಪಾಕಿಸ್ತಾನ ಹೈಕೋರ್ಟ್ ಶುಕ್ರವಾರ ತಳ್ಳಿಹಾಕಿದ ನಂತರ ಈ ಬೆಳವಣಿಗೆ ನಡೆದಿದೆ.

Comments (0)
Add Comment