ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಬಂಧನ.!

 

 

ಅಮರಾವತಿ​ : ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು  ಅವರನ್ನು ಆಂಧ್ರದ ನಂದ್ಯಾಲದಲ್ಲಿ ಇಂದು (ಸೆ.09) ರಂದು ನಸುಕಿನ ಜಾವ ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಚಂದ್ರಬಾಬು ನಾಯ್ಡು ಅವರು ಸ್ಕಿಲ್​ ಡೆವಲಪ್​​ಮೆಂಟ್​ ಯೋಜನೆಯಲ್ಲಿ 371 ಕೋಟಿ ರೂ. ಅಕ್ರಮ ಎಸಗಿದ್ದು, ಹಗರಣ ಸಂಬಂಧ ಸೂಕ್ತ ಉತ್ತರ ನೀಡದ ಹಿನ್ನೆಲೆಯಲ್ಲಿ ಹೈಕೋರ್ಟ್ ಸೂಚನೆ ಮೇರೆಗೆ ಬಂಧಿಸಲಾಗಿದೆ.

ಚಂದ್ರಬಾಬು ನಾಯ್ಡು ಅವರ ವಿರುದ್ಧ 58 ಕೋಟಿ ಯೋಜನೆಯ ವೆಚ್ಚವನ್ನು 371 ಕೋಟಿ ರೂ.ಗೆ ಹೆಚ್ಚಿಸಿದ ಆರೋಪ ಕೇಳಿಬಂದಿತ್ತು. ಈ  ಹಗರಣ ಸಂಬಂಧ ಸೂಕ್ತ ಉತ್ತರ ನೀಡದ ಹಿನ್ನೆಲೆಯಲ್ಲಿ ಹೈಕೋರ್ಟ್ ಸೂಚನೆ ಮೇರೆಗೆ ಐಪಿಸಿ ಸೆಕ್ಷನ್​ 166, 167, 481, 420, 465, 468, 471, 409, 201, r/w 109, 34 ಮತ್ತು 37ರ ಅಡಿ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದೆ.!

 

ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಬಂಧನ.!ಮಾಜಿ ಮುಖ್ಯಮಂತ್ರಿ
Comments (0)
Add Comment