ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ

 

ಚಿತ್ರದುರ್ಗ: ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ WWW.KSB.GOV.IN ದಲ್ಲಿ ಜೆ.ಸಿ.ಓ ರ‍್ಯಾಂಕ್‌ವರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿ.ಯು.ಸಿಯಲ್ಲಿ ಶೇ.60ಕ್ಕಿಂತ ಅಧಿಕ ಅಂಕ ಪಡೆದು, ವೃತ್ತಿಪರ ಶಿಕ್ಷಣದಲ್ಲಿ ಪದವಿ ವ್ಯಾಸಂಗಕ್ಕಾಗಿ 2023ನೇ ಸಾಲಿನಲ್ಲಿ ಪ್ರವೇಶಾತಿ ಪಡೆದವರು ಪ್ರಧಾನ ಮಂತ್ರಿ ಶಿಷ್ಯವೇತನ ಯೋಜನೆ ಎಂಬ ಶೀರ್ಷಿಕೆಯಡಿಲ್ಲಿ ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸಲು 2024ರ ಜ. 01 ರಿಂದ 05 ರವರೆಗೆ ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದೆ.

ಫಲಾನುಭವಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ
Comments (0)
Add Comment