ಮಾರ್ಚ್ 26 ರಂದು ನಾಯಕನಹಟ್ಟಿ ತಿಪ್ಪೇರುದ್ರ ಸ್ವಾಮಿ ದೊಡ್ಡ ರಥೋತ್ಸವ .!

 

ಚಿತ್ರದುರ್ಗ : ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಕ್ಷೇತ್ರದ ಜಾತ್ರೆಯು ಮಾರ್ಚ್ 19 ರಿಂದ ಏಪ್ರಿಲ್ 01 ರವರೆಗೆ ನಡೆಯಲಿದ್ದು, ಜಾತ್ರೆಯ ಅಂಗವಾಗಿ ಮಾರ್ಚ್ 26 ಮಂಗಳವಾರದಂದು ದೊಡ್ಡ ರಥೋತ್ಸವ ಜರುಗಲಿದೆ.

ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಅವಕಾಶ ಕಲ್ಪಿಸಿರುವುದರಿಂದ, ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಜಾತ್ರೆಗೆ ಆಗಮಿಸುವ ನಿರೀಕ್ಷೆ ಇದೆ.

ಮಾರ್ಚ್ 26 ರಂದು ನಾಯಕನಹಟ್ಟಿ ತಿಪ್ಪೇರುದ್ರ ಸ್ವಾಮಿ ದೊಡ್ಡ ರಥೋತ್ಸವ .!
Comments (0)
Add Comment