ಮಾ.​ 22ರಿಂದ ಮೂರು ದಿನಗಳ ಕಾಲ ರಾಜ್ಯದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು:ಕರ್ನಾಟಕದೆಲ್ಲೆಡೆ ಸೆಕೆ ಹೆಚ್ಚಾಗಿದೆ. ಮಾರ್ಚ್​ 22ರಿಂದ ಮೂರು ದಿನಗಳ ಕಾಲ ರಾಜ್ಯದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗೊಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಒಣಹವೆ ಮುಂದುವರೆಯಲಿದೆ. ಕಲಬುರಗಿಯಲ್ಲಿ 40.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬೆಳಗಾವಿ ವಿಮಾನ ನಿಲ್ದಾಣದಲ್ಲಿ 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ಬೆಂಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರಿನಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ.

Comments (0)
Add Comment