ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಪ್ರವೇಶಾತಿಗೆ ಅರ್ಜಿ

 

ಚಿತ್ರದುರ್ಗ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ 2023-24ನೇ ಸಾಗೆ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಪ್ರವೇಶಾತಿಗಾಗಿ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 11 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು https://shp.karnataka.gov.in ವೆಬ್‍ಸೈಟ್ ಮೂಲಕ 2023ರ ಅಕ್ಟೋಬರ್ 11 ರೊಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಪ್ರವೇಶಾತಿಗೆ ಅರ್ಜಿ
Comments (0)
Add Comment