“ಮೇ” ಮೊದಲ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ.!

 

ಬೆಂಗಳೂರು : ಏಪ್ರಿಲ್ 15ರಿಂದ ಮೌಲ್ಯಮಾಪನ ಕಾರ್ಯ ಆರಂಭವಾಗಲಿದ್ದು, ಸುಮಾರು 20 ದಿನಗಳಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಆದಷ್ಟು ಬೇಗನೆ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಲಿದ್ದು, ಏಪ್ರಿಲ್ ಕೊನೆಯ ವಾರ ಅಥವಾ ಮೇ ಮೊದಲ ವಾರದಲ್ಲಿ ವಿದ್ಯಾರ್ಥಿಗಳು ಫಲಿತಾಂಶ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದ ಮಂಜುಳಾ ತಿಳಿಸಿದ್ದಾರೆ.

ಈ ನಡುವೆ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರ ವಿಷಯವಾರು ಕೀ ಉತ್ತರಗಳನ್ನು ದಿನಾಂಕ: 06.04.2024ರಂದು ಮಂಡಲಿಯ ಜಾಲತಾಣದಲ್ಲಿ http://kseab.karnataka.gov.inನಲ್ಲಿ ಪ್ರಕಟಿಸಿದೆ.

“ಮೇ” ಮೊದಲ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ.!
Comments (0)
Add Comment